ಹರಪನಹಳ್ಳಿ: ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುತ್ತಿರುವ 150 ಕಾರ್ಮಿಕರಿಗೆ 9 ತಿಂಗಳ ಬಾಕಿ ವೇತನ ಪಾವತಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎ.ಐ.ಟಿ.ಯು.ಸಿ) ನೇತೃತ್ವದಲ್ಲಿ ಕಾರ್ಮಿಕರು ತಾಲ್ಲೂಕಿನ ಅರಸೀಕೆರೆಯಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

‘ತಾಲ್ಲೂಕಿನಲ್ಲಿರುವ ಸಮುದಾಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹೊರಗುತ್ತಿಗೆಯಲ್ಲಿ ಕೆಲಸ ಮಾಡುತ್ತಿರುವ 150 ಕಾರ್ಮಿಕರಿಗೆ 9 ತಿಂಗಳಿನಿಂದ ಗುತ್ತಿಗೆದಾರರು ವೇತನ ಪಾವತಿಸಿಲ್ಲ. ಇದರಿಂದ ತೊಂದರೆಯಾಗಿದೆ. ಸಂಬಳವನ್ನೇ ನೆಚ್ಚಿಕೊಂಡಿರುವ ಕುಟುಂಬಗಳಿಗೆ ಆರ್ಥಿಕವಾಗಿ ತೊಂದರೆಯಾಗಿದೆ. ಕೂಡಲೇ ವೇತನ ಪಾವತಿಸಿ’ ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ಕಾರ್ಮಿಕರ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಎಂದು ಒತ್ತಾಯಿಸಿ ಅರಸೀಕೆರೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ವೆಂಕಟೇಶ ಅವರಿಗೆ ಮನವಿ ಸಲ್ಲಿಸಿದರು.

ಮುಖಂಡರಾದ ಗುಡಿಹಳ್ಳಿ ಹಾಲೇಶ್, ಯರಬಳ್ಳಿ ಅಭಿಷೇಕ, ಅರಸೀಕೆರೆ ಮಲ್ಲಿಕಾರ್ಜುನ, ಕಸವನಹಳ್ಳಿ ಹನುಮಂತ, ಮಹೇಶ್, ಪಕ್ಕೀರಮ್ಮ, ಕಮಲಮ್ಮ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.