ಹೂವಿನಹಡಗಲಿ: ತಾಲ್ಲೂಕಿನಲ್ಲಿ ಉತ್ತಮ ಮಳೆ ಸುರಿಯುತ್ತಿದ್ದು, ರೈತರ ಟ್ರ್ಯಾಕ್ಟರ್ಗಳಿಗೆ ಡಿಸೇಲ್ ಸಿಗದೇ ಮುಂಗಾರು ಕೃಷಿ ಚಟುವಟಿಕೆಗೆ ಹಿನ್ನಡೆ ಉಂಟಾಗಿದೆ. ತಕ್ಷಣ ಸಮರ್ಪಕವಾಗಿ ಇಂಧನ ಪೂರೈಕೆ ಮಾಡಬೇಕು ಎಂದು ತಾಲ್ಲೂಕು ರೈತ ಸಂಘ ಆಗ್ರಹಿಸಿದೆ.

ಟ್ರ್ಯಾಕ್ಟರ್ ಗಳಿಗೆ ಇಂಧನ ಸಿಗದೇ ಮುಂಗಾರು ಬಿತ್ತನೆಗೆ ಭೂಮಿ ಹದಗೊಳಿಸಲು, ಬಿತ್ತನೆ ಕಾರ್ಯಗಳಿಗೆ ತೀವ್ರ ಹಿನ್ನಡೆಯಾಗಿದೆ. ಟ್ರ್ಯಾಕ್ಟರ್ ಹೊಂದಿರುವ ರೈತರು ಪೆಟ್ರೋಲ್ ಬಂಕ್ ಗಳ ಮುಂದೆ ಕ್ಯಾನ್ ಹಿಡಿದು ಸರದಿ ಸಾಲಿನಲ್ಲಿ ನಿಂತರೂ ಇಂಧನ ಸಿಗುತ್ತಿಲ್ಲ. ರಸಗೊಬ್ಬರ, ಬಿತ್ತನೆ ಬೀಜ ಬೆಲೆ ದುಪ್ಪಟ್ಟಾಗಿರುವುದು ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ತಕ್ಷಣ ಸರ್ಕಾರ ಸಮರ್ಪಕವಾಗಿ ಇಂಧನ ಪೂರೈಕೆ ಮಾಡಬೇಕು. ಗೊಬ್ಬರ, ಬೀಜ ಸಮರ್ಪಕ ದಾಸ್ತಾನು ಮಾಡಬೇಕು ಎಂದು ರೈತ ಸಂಘದ ಅಧ್ಯಕ್ಷ ಹೊಸಮನಿ ಸಿದ್ದಪ್ಪ, ಕಾರ್ಯದರ್ಶಿ ಎಂ. ಶಿವರಾಜ್ ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-25-263834039

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.