ಹೊಸಪೇಟೆ (ವಿಜಯನಗರ): ಜಾತಿ, ಧರ್ಮ, ಮೌಡ್ಯವನ್ನು ಮರೆತು ಮಾನವಿಯ ಮೌಲ್ಯಗಳನ್ನು ಪ್ರತಿಯೊಬ್ಬರು ಬೆಳೆಸಿಕೊಂಡು, ಸಮಾಜದಲ್ಲಿ ಜೀವನ ನಡೆಸುವುದು ಬಹಳ ಮುಖ್ಯ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಚಿರಿತ್ರೆ ವಿಭಾಗದ ಪ್ರಾಧ್ಯಾಪಕ ಪ್ರೊ.ಎನ್. ಚಿನ್ನಸ್ವಾಮಿ ಸೋಸಲೆ ಹೇಳಿದರು.

ನಗರದ ಶ್ರೀ ಶಂಕರ್ ಆನಂದಸಿಂಗ್ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಎಂ.ಕಲ್ಲಹಳ್ಳಿಯ ಸ್ವಾಮಿ ವಿವೇಕಾನಂದ ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಆಶ್ರಯದಲ್ಲಿ ನಡೆದ ಜಿಲ್ಲೆಯ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣೆ ಹಾಗೂ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶೋಷಣೆ ಎನ್ನುವುದು ಎಲ್ಲಾ ವರ್ಗದಲ್ಲಿ ಇದೆ. ಅದು ಕೆಳವರ್ಗಕ್ಕೆ ಸೀಮಿತವಾಗಿಲ್ಲ ಇದನ್ನು ಪ್ರತಿಯೊಬ್ಬರು ಪ್ರಸ್ತುತವಾಗ ಅರಿತು ನಡೆಯಬೇಕಾಗಿದೆ ಹಾಗೂ ಪ್ರತಿಯೊಬ್ಬರು ಪ್ರಶ್ನೆ ಮಾಡಿವ ಕೌಶಲಗಳನ್ನು ಬೆಳೆಸಿಕೊಳ್ಳಬೇಕು ಎಂದರು.

ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಚ್.ಎನ್.ಎಫ್.ಮೊಹಮ್ಮದ್ ಇಮಾಮ್ ನಿಯಾಜಿ ಕಾರ್ಯಕ್ರಮ ಉದ್ಘಾಟಿಸಿದರು .

ಸಂಸ್ಥೆಯ ಅಧ್ಯಕ್ಷ ಅಕ್ಕಿ ಮಲ್ಲಿಕಾರ್ಜುನ ಪ್ರಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ನಾಯಕರ ಭೀಮೇಶ್ ಪ್ರಥಮಸ್ಥಾನ, ಈ.ಉಮಾದೇವಿ ದ್ವಿತೀಯ ಸ್ಥಾನ ಹಾಗೂ ಆಯುಷಾ ಖಾನಂ ತೃತೀಯ ಸ್ಥಾನ ಪಡೆದುಕೊಂಡರು.

ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ.ಶಿವಪ್ಪ, ಉಪನ್ಯಾಸಕರಾದ ಡಾ.ಜಯಣ್ಣ, ಡಾ.ಕೆ ಪನ್ನಂಗಧರ, ಡಾ.ಹೆಬಸೂರ್,ಡಾ ಸುರೇಶ್ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.