ಹೂವಿನಹಡಗಲಿ: ತಾಲ್ಲೂಕಿನ ಕೋಟಿಹಾಳ ಗ್ರಾಮದ ಅಧಿದೇವತೆ ದ್ಯಾಮಮ್ಮ ದೇವಿ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.

ಬುಧವಾರ ಬೆಳಗಿನಜಾವ ದೇವಿಯ ಉತ್ಸವ ಮೂರ್ತಿಯೊಂದಿಗೆ ತುಂಗಭದ್ರಾ ನದಿ ತೀರಕ್ಕೆ ತೆರಳಿ ಗಂಗಾ ಪೂಜೆ ನೆರವೇರಿಸಲಾಯಿತು. ನಂತರ ಗ್ರಾಮದ ಮುಖ್ಯ ಬೀದಿಯಲ್ಲಿ ದೇವಿಯ ಉತ್ಸವ ವಿಜೃಂಭಣೆಯಿಂದ ಜರುಗಿತು.

ಚೌತಿಮನೆ ಕಟ್ಟೆಯಲ್ಲಿ ದೇವಿಯನ್ನು ಪ್ರತಿಷ್ಠಾಪಿಸಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಗ್ರಾಮದ ಮಹಿಳೆಯರು ಭಕ್ತಿಭಾವದಿಂದ ದೇವಿಗೆ ಉಡಿ ತುಂಬಿ, ಪೂಜೆ ಸಲ್ಲಿಸಿದರು.

ದೇವಿ ಜಾತ್ರೆಯಲ್ಲಿ ಪ್ರಾಣಿ ಬಲಿ ನೀಡದಂತೆ ಗ್ರಾಮಸ್ಥರು ತೀರ್ಮಾನ ಕೈಗೊಂಡು, ಕಟ್ಟು ನಿಟ್ಟಾಗಿ ಪಾಲಿಸಿದರು. ಹಾಗಾಗಿ ಗ್ರಾಮಸ್ಥರು ದೇವಿಗೆ ಹೋಳಿಗೆ ನೈವೇದ್ಯ ಸಮರ್ಪಿಸಿ ‘ಹೋಳಿಗೆ ಹಬ್ಬ’ ಆಚರಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-25-251115187

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.