ಹೂವಿನಹಡಗಲಿ: ಇಲ್ಲಿನ ಜಿಬಿಆರ್ ಪದವಿ ಕಾಲೇಜು ಹಾಗೂ ಸ್ನಾತಕ ಕೇಂದ್ರದ ಸಹಯೋಗದಲ್ಲಿ ಇದೇ 27ರಂದು ಕಾಲೇಜಿನ ಹಾನಗಲ್ ಕುಮಾರೇಶ ಸಭಾಂಗಣದಲ್ಲಿ ‘ಕರ್ನಾಟಕದಲ್ಲಿ ಪ್ರಾದೇಶಿಕ ಅಸಮತೋಲನ’ ‘ಉತ್ತರ ಕರ್ನಾಟಕದ ಅಭಿವೃದ್ಧಿಯ ಸವಾಲುಗಳು ಮತ್ತು ಅವಕಾಶಗಳು’ ಕುರಿತು ರಾಜ್ಯಮಟ್ಟದ ವಿಚಾರ ಸಂಕಿರಣ ಹಮ್ಮಿಕೊಂಡಿದ್ದೇವೆ ಎಂದು ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಸಿ.ಮೋಹನರೆಡ್ಡಿ, ಪ್ರಾಚಾರ್ಯ ಎಸ್.ಎಸ್.ಪಾಟೀಲ್ ಹೇಳಿದರು.

ಶಾಸಕ ಕೃಷ್ಣನಾಯ್ಕ ಉದ್ಘಾಟಿಸಲಿದ್ದು, ವೀ.ವಿ. ಸಂಘದ ಅಧ್ಯಕ್ಷ ಕಣೆಕಲ್ ಮಹಾಂತೇಶ ಅಧ್ಯಕ್ಷತೆ ವಹಿಸುವರು. ಬಳ್ಳಾರಿ ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯ ಕುಲಪತಿ ಎಂ.ಮುನಿರಾಜು ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಿದ್ದಾರೆ. ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಸದಸ್ಯ ಎಸ್.ಟಿ.ಬಾಗಲಕೋಟೆ ಹಾಗೂ ವೀ.ವಿ. ಸಂಘದ ಪದಾಧಿಕಾರಿಗಳು ಉಪಸ್ಥಿರಿರುವರು ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಡಾ. ಡಿ.ಎಂ.ನಂಜುಂಡಪ್ಪ ಉನ್ನತಾಧಿಕಾರ ಸಮಿತಿ ರಾಜ್ಯದಲ್ಲಿ 39 ಅತೀ ಹಿಂದುಳಿದ ತಾಲ್ಲೂಕುಗಳನ್ನು ಗುರುತಿಸಿತ್ತು. ಇತ್ತೀಚಿಗೆ ಡಾ.ಎಂ. ಗೋವಿಂದರಾವ್ ನೇತೃತ್ವದ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ 93 ತಾಲ್ಲೂಕುಗಳು ಅತೀ ಹಿಂದುಳಿದಿವೆ ಎಂದು ಗುರುತಿಸಿದೆ. ಆ ಪಟ್ಟಿಯಲ್ಲಿನ ಶೇ 60ರಷ್ಟು ತಾಲ್ಲೂಕುಗಳು ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗಕ್ಕೆ ಸೇರಿದ ತಾಲ್ಲೂಕುಗಳಾಗಿವೆ. ಇದನ್ನು ಗಮನದಲ್ಲಿಟ್ಟುಕೊಂಡು ವಿಚಾರ ಸಂಕಿರಣ ಆಯೋಜಿಸಲಾಗಿದೆ. ಈ ಕುರಿತು ಪರಿಣಿತರು ಪತ್ರಿಕೆ ಹಾಗೂ ಪ್ರಬಂಧ ಮಂಡಿಸಲಿದ್ದಾರೆ. ಎಲ್ಲ ಮಾಹಿತಿ ಕ್ರೂಢೀಕರಿಸಿ ಪ್ರಾದೇಶಿಕ ಅಸಮತೋಲನದ ಮೇಲೆ ಬೆಳಕು ಚೆಲ್ಲುವ ವರದಿಯನ್ನು ಸರ್ಕಾರಕ್ಕೆ ಮಂಡಿಸಲಾಗುತ್ತದೆ ಎಂದು ಮಾಹಿತಿ ನೀಡಿದರು. ಪಪೂ ಕಾಲೇಜು ಪ್ರಾಚಾರ್ಯ ಅಮರೇಗೌಡ ಪಾಟೀಲ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-25-1314532360

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.