ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆಯಿಂದ ತುಂಗಭದ್ರಾ ನದಿಯಲ್ಲಿ ಒಳ ಹರಿವು ಹೆಚ್ಚಳ

Published 29 ಮೇ 2024, 14:10 IST
Last Updated 29 ಮೇ 2024, 14:10 IST
ಅಕ್ಷರ ಗಾತ್ರ

ಹೂವಿನಹಡಗಲಿ/ ಹೊಸಪೇಟೆ: ಮಲೆನಾಡು ಹಾಗೂ ಜಲಾನಯನ ಪ್ರದೇಶದಲ್ಲಿ ಮಳೆ ಸುರಿಯುತ್ತಿರುವುದರಿಂದ ತುಂಗಭದ್ರಾ ನದಿಯಲ್ಲಿ ಒಳ ಹರಿವು ಪ್ರಾರಂಭವಾಗಿದೆ. ಇಲ್ಲಿನ ಸಿಂಗಟಾಲೂರು ಬ್ಯಾರೇಜ್ ನಲ್ಲಿ ನೀರು ಸಂಗ್ರಹ ಹೆಚ್ಚುತ್ತಿದ್ದು, ಮಂಗಳವಾರ 1100 ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡಲಾಗಿದೆ.

ಕಳೆದ ವರ್ಷ ಮುಂಗಾರು, ಹಿಂಗಾರು ಮಳೆ ಕೊರತೆಯಿಂದ ತುಂಗಭದ್ರಾ ನದಿ ಬತ್ತಿ ಹೋಗಿತ್ತು. ಪಟ್ಟಣ ಸೇರಿದಂತೆ ತಾಲ್ಲೂಕಿನ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳಿಗೆ ನೀರಿನ ಲಭ್ಯತೆ ಇಲ್ಲದೇ ಸ್ಥಗಿತಗೊಂಡಿದ್ದವು. ಸಿಂಗಟಾಲೂರು ಬ್ಯಾರೇಜ್ ಡೆಡ್ ಸ್ಟೋರೇಜ್ ತಲುಪಿತ್ತು. ನೀರಿನ ಸಮಸ್ಯೆ ತೀವ್ರಗೊಳ್ಳುವ ಮುನ್ನ ಮಳೆ ಸುರಿದಿರುವುದು ಜನರಿಗೆ ಕೊಂಚ ಸಮಾಧಾನ ತಂದಿದೆ.

ಕೆಲ ದಿನಗಳಿಂದ ನದಿಯ ಒಳ ಹರಿವು ಹೆಚ್ಚಳವಾಗಿರುವುದರಿಂದ ಸಿಂಗಟಾಲೂರು ಬ್ಯಾರೇಜ್ ನಲ್ಲಿ 1.981 ಟಿಎಂಸಿ ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಬ್ಯಾರೇಜ್‌ನ  ಎರಡು ಗೇಟ್‌ಗಳನ್ನು ತೆರೆದು ನದಿಗೆ ನೀರು ಹರಿಸಲಾಗುತ್ತಿದೆ. ಕೆಲ ದಿನಗಳಿಂದ ನದಿಯಲ್ಲಿ ಸ್ಥಗಿತವಾಗಿದ್ದ ನೀರ ಹರಿವು ಇಂದಿನಿಂದ ಪ್ರಾರಂಭವಾಗಿದೆ.

‘ಜಲಾನಯನ ಪ್ರದೇಶದಲ್ಲಿ ಮಳೆಯಾಗಿದ್ದರಿಂದ ಒಳ ಹರಿವು ಕ್ರಮೇಣ ಹೆಚ್ಚಳವಾಗುತ್ತಿದೆ. ಮೇಲಧಿಕಾರಿಗಳ ನಿರ್ದೇಶನದಂತೆ ಬ್ಯಾರೇಜ್ ಸಮತೋಲನ ಕಾಯ್ದುಕೊಂಡು 1100 ಕ್ಯೂಸೆಕ್ ನೀರನ್ನು ನದಿಗೆ ಹರಿಸುತ್ತಿದ್ದೇವೆ’ ಎಂದು ಸಿಂಗಟಾಲೂರು ಏತ ನೀರಾವರಿ ಯೋಜನೆ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ರಾಘವೇಂದ್ರ ತಿಳಿಸಿದರು.

ಇನ್ನೂ ಆರಂಭವಾಗದ ಒಳಹರಿವು:

ಹೊಸಪೇಟೆ ಸಮೀಪದ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಇನ್ನೂ ಆರಂಭವಾಗಿಲ್ಲ. ಬುಧವಾರ ಜಲಾಶಯದಲ್ಲಿ 3.38 ಟಿಎಂಸಿ ಅಡಿಯಷ್ಟು ನೀರಿತ್ತು. ಸಿಂಗಾಟಾಲೂರು ಬ್ಯಾರೇಜ್‌ನಿಂದ ನೀರು ಹರಿವು ಆರಂಭವಾಗಿರುವುದರಿಂದ ಒಂದೆರಡು ದಿನದೊಳಗೆ ತುಂಗಭದ್ರಾ ಜಲಾಶಯಕ್ಕೂ ಒಳಹರಿವು ಆರಂಭವಾಗುವ ನಿರೀಕ್ಷೆ ಇದೆ.

1633 ಅಡಿ ಎತ್ತರದ ಅಣೆಕಟ್ಟೆಯಲ್ಲಿ ಸದ್ಯ 1,577.40 ಅಡಿಯಷ್ಟು ನೀರಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ ಜಲಾಶಯದಲ್ಲಿ 4.47 ಟಿಎಂಸಿ ಅಡಿಯಷ್ಟು ನೀರಿನ ಸಂಗ್ರಹವಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT