ಹೂವಿನಹಡಗಲಿ: ಪಟ್ಟಣದಲ್ಲಿರುವ ವಿವಿಧ ಐಸ್ ಕ್ರೀಂ ತಯಾರಿಕಾ ಘಟಕಗಳಿಗೆ ತಹಶೀಲ್ದಾರ್ ಕೆ.ಎಂ. ಗುರುಬಸವರಾಜ ಸೋಮವಾರ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.

ಕೆಲವು ಘಟಕಗಳಲ್ಲಿ ಐಸ್ ತಯಾರಿಕೆಗೆ ರಾಸಾಯನಿಕ ಬಣ್ಣ, ಕಲಬೆರಕೆಯ ಪದಾರ್ಥಗಳನ್ನು ಬಳಕೆ ಮಾಡಿರುವುದು ಕಂಡು ಬಂತು. ಐಸ್ ಕ್ರೀಂ ಮಾದರಿಗಳನ್ನು ಸಂಗ್ರಹಿಸಿ, ಪ್ರಯೋಗಾಲಯ ಪರೀಕ್ಷೆಗೆ ಕಳಿಸಲು ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.

ಪಟ್ಟಣದ ಕೈಗಾರಿಕಾ ಪ್ರದೇಶದಲ್ಲಿರುವ ‘ಎ- ಒನ್’ ಐಸ್ ತಯಾರಿಕಾ ಘಟಕದಲ್ಲಿ ಸ್ವಚ್ಛತೆ ಇಲ್ಲದೇ ದುರ್ನಾತ ಬೀರುತ್ತಿತ್ತು. ಪರಿಶೀಲನೆ ವೇಳೆ ಐಸ್ ಕ್ರೀಂ ತಯಾರಿಕೆಗೆ ಅವಧಿ ಮೀರಿದ ರಾಸಾಯನಿಕ ಬಣ್ಣ ಪತ್ತೆಯಾಯಿತು. ತುಂಡಾದ ಐಸ್ ಗಳನ್ನು ಮರು ಮಾರಾಟಕ್ಕೆ ಸಿದ್ದಗೊಳಿಸಲಾಗುತಿತ್ತು. ಘಟಕದ ಅನೈರ್ಮಲ್ಯ ಕಂಡು ಮಾಲೀಕರನ್ನು ತಹಶೀಲ್ದಾರ್ ತರಾಟೆಗೆ ತೆಗೆದುಕೊಂಡರು. ರಾಜೀವ ನಗರದ ಎಸ್ಎಸ್ ಐಸ್ ಕ್ರೀಂ ತಯಾರಿಕಾ ಘಟಕದಲ್ಲಿಯೂ ಅನೈರ್ಮಲ್ಯ ಕಂಡು ಬಂತು.

‘ಐಸ್ ತಯಾರಿಕೆಗೆ ಶುದ್ಧ ನೀರು ಬಳಸಬೇಕು. ರಾಸಾಯನಿಕ ಬಣ್ಣ ಬಳಸಬಾರದು. ಘಟಕದಲ್ಲಿ ನೈರ್ಮಲ್ಯ ಕಾಪಾಡಬೇಕು. ಆಹಾರ ಗುಣಮಟ್ಟ ಮತ್ತು ಸುರಕ್ಷತೆಯ ಮಾರ್ಗಸೂಚಿಯಂತೆ ಪದಾರ್ಥಗಳನ್ನು ಬಳಕೆ ಮಾಡಬೇಕು. ಆದರೆ, ಇಲ್ಲಿನ ಘಟಕಗಳು ಈ ನಿಯಮಗಳನ್ನು ಗಾಳಿಗೆ ತೂರಿ, ಮನಬಂದಂತೆ ಐಸ್ ತಯಾರಿಕೆಯಲ್ಲಿ ತೊಡಗಿದ್ದವು. ಸಾರ್ವಜನಿಕರ ದೂರಿನ ಮೇರೆಗೆ ಘಟಕಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದೇವೆ’ ಎಂದು ತಹಶೀಲ್ದಾರ್ ಗುರುಬಸವರಾಜ ತಿಳಿಸಿದರು.

‘ಬೇಸಿಗೆಯಲ್ಲಿ ಹೆಚ್ಚು ಜನರು ಐಸ್ ಕ್ರೀಂ ಮೊರೆ ಹೋಗುತ್ತಾರೆ. ಐಸ್ ತಯಾರಿಕಾ ಘಟಕಗಳು ಜನರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ನಿಯಮಗಳನ್ನು ತಪ್ಪದೇ ಪಾಲಿಸಬೇಕು. ಪಟ್ಟಣದ ಎಲ್ಲ ಘಟಕಗಳಲ್ಲಿ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳಿಸಿಕೊಡಲು ತಾಲ್ಲೂಕು ಆರೋಗ್ಯಾಧಿಕಾರಿಗೆ ತಿಳಿಸಿದ್ದೇವೆ. ವರದಿ ಬಂದ ನಂತರ ಕಾನೂನು ಕ್ರಮ ಕೈಗೊಳ್ಳುತ್ತೇವೆ’ ಎಂದರು. ತಾಲ್ಲೂಕು ವೈದ್ಯಾಧಿಕಾರಿ ಡಾ.ಅಶೋಕ, ಪುರಸಭೆ ಆರೋಗ್ಯ ನಿರೀಕ್ಷಕ ಮಾರುತಿ, ಗ್ರಾಮ ಲೆಕ್ಕಾಧಿಕಾರಿ ಜಗದೀಶ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-25-500285429

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.