ಹೂವಿನಹಡಗಲಿ: ಕ್ಷೇತ್ರದ ವಿದ್ಯಾವಂತ ಯುವಕ, ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸಿಕೊಡಲು ಜೂ. 2ರಂದು ಪಟ್ಟಣದ ಜಿಬಿಆರ್ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ ಹಮ್ಮಿಕೊಂಡಿದ್ದೇವೆ ಎಂದು ಶಾಸಕ ಎಲ್.ಕೃಷ್ಣನಾಯ್ಕ ತಿಳಿಸಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೈಗಾರಿಕೆ, ವಾಣಿಜ್ಯ, ವ್ಯಾಪಾರಿ ಚಟುವಟಿಕೆಗಳಿಲ್ಲದ ಹಿಂದುಳಿದ ತಾಲ್ಲೂಕಿನಲ್ಲಿ ಉದ್ಯೋಗವಕಾಶಗಳು ಕಡಿಮೆ. ಪದವಿ ಕಾಲೇಜುಗಳ ಮುಖ್ಯಸ್ಥರು, ಪೋಷಕರ ಒತ್ತಾಸೆಯಂತೆ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ 100ಕ್ಕೂ ಹೆಚ್ಚು ಪ್ರಮುಖ ಕಂಪೆನಿಗಳು ಭಾಗವಹಿಸುತ್ತಿದ್ದು, ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ, ಐಟಿಐ, ಪದವಿ ಹಾಗೂ ತಾಂತ್ರಿಕ ವೃತ್ತಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಶೈಕ್ಷಣಿಕ ದಾಖಲೆಗಳೊಂದಿಗೆ ಮೇಳದಲ್ಲಿ ಪಾಲ್ಗೊಳ್ಳಬೇಕು. ನವೋದ್ಯಮ ಆರಂಭಿಸುವ ಚಿಂತನೆಯಲ್ಲಿರುವ ಯುವಕರಿಗೆ ಪರಿಣಿತರಿಂದ ಸೂಕ್ತ ಮಾರ್ಗದರ್ಶನ ಕೊಡಿಸಲಾಗುತ್ತದೆ ಎಂದು ಹೇಳಿದರು.

ಎಸ್ಆರ್ ಎಂಪಿಪಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳುವ ಕುರಿತು ಮಾರ್ಗದರ್ಶನ ನೀಡಲಾಗುತ್ತಿದೆ. ನಗರ ಪ್ರದೇಶಗಳಲ್ಲಿ ಬೇಡಿಕೆ ಇರುವ ವಸ್ತುಗಳು, ಪದಾರ್ಥಗಳ ಉತ್ಪಾದನೆ ಕುರಿತು ತರಬೇತಿ ನೀಡಲಾಗುತ್ತದೆ. ಕಚ್ಚಾಸಾಮಗ್ರಿ ಪೂರೈಸಿ, ಉತ್ಪಾದನೆಯಾಗುವ ವಸ್ತುಗಳ ಖರೀದಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಆಸಕ್ತ ಮಹಿಳೆಯರು, ವಿದ್ಯಾವಂತ ಯುವಕ, ಯುವತಿಯರು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಬಿಜೆಪಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಪೂಜಾರ್, ಮುಖಂಡರಾದ ವಾರದ ಗೌಸ್ ಮೊಹಿದ್ದೀನ್, ಸಿ.ಮೋಹನರೆಡ್ಡಿ, ಎಚ್.ಪೂಜಪ್ಪ, ಸೊಪ್ಪಿನ ಮಂಜುನಾಥ, ಹಣ್ಣಿ ಶಶಿಧರ, ಟಿ. ಮಹಾಂತೇಶ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-25-453728364

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.