ಹೂವಿನಹಡಗಲಿ: ತಾಲ್ಲೂಕಿನ ಮಾಗಳ ಗ್ರಾಮದಲ್ಲಿ ಗೋಣಿಬಸವೇಶ್ವರ ಜಾತ್ರೆ ಹಾಗೂ ಬಸವ ಜಯಂತಿ ಪ್ರಯುಕ್ತ ಸೋಮವಾರ ಸಾಮೂಹಿಕ ವಿವಾಹ ಕಾರ್ಯಕ್ರಮ ನೆರವೇರಿತು.

ಬೆಳಿಗ್ಗೆ ತುಂಗಭದ್ರಾ ನದಿ ತೀರಕ್ಕೆ ತೆರಳಿ ಗಂಗಾಪೂಜೆ ನೆರವೇರಿಸಿ ಕುಂಭೋತ್ಸವದಲ್ಲಿ ತಂದ ಪವಿತ್ರ ಜಲದಿಂದ ಗೋಣಿಬಸವೇಶ್ವರ ಸ್ವಾಮಿಗೆ ಅಭಿಷೇಕ ಮಾಡಲಾಯಿತು. ನಂತರ ಜರುಗಿದ ಸಾಮೂಹಿಕ ವಿವಾಹದಲ್ಲಿ ಆರು ಜೋಡಿಗಳು ಹಸೆಮಣೆ ಏರಿದರು. ಮುಂಡರಗಿಯ ಅನ್ನದಾನೇಶ್ವರ ಸ್ವಾಮೀಜಿ, ಅಂಗೂರಿನ ಶಿವಯೋಗೀಶ್ವರ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಎಚ್.ಎಂ.ಬಸವರಾಜ ಸ್ವಾಮಿ ನೇತೃತ್ವ ವಹಿಸಿದ್ದರು.

ಗ್ರಾಮದಲ್ಲಿ ಬಸವ ಜಯಂತಿ ಅಂಗವಾಗಿ ಎತ್ತಿನ ಮೆರವಣಿಗೆಯೊಂದಿಗೆ ಮೈಲಾರಲಿಂಗೇಶ್ವರ ಉತ್ಸವ ಮೂರ್ತಿಯ ಮೆರವಣಿಗೆ ನಡೆಸಲಾಯಿತು. ಗ್ರಾಮದ ಇಷ್ಟಾರ್ಥ ಸಿದ್ಧಿ ವೀರಭದ್ರೇಶ್ವರ ಸ್ವಾಮಿ ಜಾತ್ರ ಮಹೋತ್ಸವವು ಜರುಗಿತು.

ದೇವಸ್ಥಾನದಲ್ಲಿ ಬೆಳಿಗ್ಗೆ ಹೋಮ, ಹವನ ವಿಶೇಷ ಪೂಜೆ, ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಶ್ರೀನಿವಾಸ ಆಚಾರ್ಯ, ಎಚ್.ಎಂ.ಗಂಗಾಧರಯ್ಯ ಸ್ವಾಮಿ ಪೌರೋಹಿತ್ಯ ನೆರವೇರಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-25-2037334046

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.