ಹೂವಿನಹಡಗಲಿ: ‘ಸಮಾಜದ ಸುರಕ್ಷತೆ ಹಾಗೂ ಸ್ವಾಸ್ಥ್ಯ ಕಾಪಾಡಲು ಪೊಲೀಸ್ ಇಲಾಖೆ ಶ್ರಮಿಸುತ್ತಿದ್ದು, ಇದಕ್ಕೆ ಸಾರ್ವಜನಿಕರ ಸಹಕಾರ ಅಗತ್ಯವಿದೆ’ ಎಂದು ಸಿಪಿಐ ಮಲ್ಲಪ್ಪ ಹೂಗಾರ ಹೇಳಿದರು.

ಪಟ್ಟಣದ ಶ್ರೀರಾಮ ದೇವಸ್ಥಾನದಲ್ಲಿ ಬುಧವಾರ ಪೊಲೀಸ್ ಇಲಾಖೆ ಹಮ್ಮಿಕೊಂಡಿದ್ದ ಮೊಹಲ್ಲಾ ಸಭೆಯಲ್ಲಿ ಅವರು ಮಾತನಾಡಿದರು.

‘ಯಾವುದೇ ಅಪರಾಧ ಕೃತ್ಯಗಳು ಸಂಭವಿಸಿದಲ್ಲಿ ತಕ್ಷಣ 112 ಸಂಪರ್ಕಿಸಿ, ಪೊಲೀಸರ ತುರ್ತು ಸೇವೆ ಪಡೆಯಬಹುದು. ಮನೆಗೆ ಬೀಗ ಹಾಕಿಕೊಂಡು ಬೇರೆ ಊರಿಗೆ ಹೋದಾಗ 9480805700 ಸಂಖ್ಯೆಗೆ ಸಂದೇಶ ಕಳಿಸಿದರೆ ಪೊಲೀಸ್ ಇಲಾಖೆಯಿಂದ ನಿಗಾ ವಹಿಸಲಾಗುತ್ತದೆ. ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮದಡಿ ಪೊಲೀಸರು ಮನೆಗಳಿಗೆ ಭೇಟಿ ನೀಡಿ ಅಹವಾಲು ಆಲಿಸಲಿದ್ದಾರೆ. ಯಾವುದೇ ತೊಂದರೆ ಇದ್ದಲ್ಲಿ, ಹಿಂಜರಿಕೆ ಇಲ್ಲದೆ ಮಾಹಿತಿ ನೀಡಬೇಕು’ ಎಂದು ತಿಳಿಸಿದರು.

‘ಅಪರಾಧಗಳು ಈಗ ಡಿಜಿಟಲ್ ಸ್ವರೂಪ ಪಡೆದಿವೆ. ಮೊಬೈಲ್ ಫೋನ್ಗೆ ಬರುವ ಒಟಿಪಿ ಸಂದೇಶಗಳಿಗೆ ಪ್ರತಿಕ್ರಿಯಿಸಬಾರದು. ಸೈಬರ್ ಅಪರಾಧ ಆದ ತಕ್ಷಣ 1930 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಬೇಕು’ ಎಂದು ಹೇಳಿದರು.

ಅಪರಾಧ ವಿಭಾಗದ ಪಿಎಸ್ಐ ವಾಸು ಹಾಗೂ ಸಿಬ್ಬಂದಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-25-1221859762

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.