ಹೂವಿನಹಡಗಲಿ: ತಾಲ್ಲೂಕಿನ ಉತ್ತಂಗಿ ಗ್ರಾಮದ ಹತ್ತಿರ ಅರಭಾವಿ-ಚಳ್ಳಕೆರೆ ರಾಜ್ಯ ಹೆದ್ದಾರಿ ದುರಸ್ತಿ ಕಾಮಗಾರಿ ಅರಬರೆಯಾಗಿದ್ದು, ಇಲ್ಲಿ ಸರಣಿ ಅಪಘಾತಗಳು ಸಂಭವಿಸುತ್ತಿದ್ದರೂ ಯಾರೂ ಗಮನಹರಿಸುತ್ತಿಲ್ಲ ಎಂದು ಉತ್ತಂಗಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಹೆದ್ದಾರಿಯಲ್ಲಿ ಗುಂಡಿಬಿದ್ದು ಹಾಳಾಗಿರುವ ಆಯ್ದ ಭಾಗಗಳ ದುರಸ್ತಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಉತ್ತಂಗಿಯ ತೀರ್ಥರಾಮೇಶ್ವರ ಪ್ಲಾಟ್ ಬಳಿ ಅರ್ಧ ಕಿ.ಮೀ. ಹಾಗೂ ಉತ್ತಂಗಿ ಕ್ರಾಸ್ ಬಳಿ 50 ಮೀಟರ್ನಷ್ಟು ರಸ್ತೆಯನ್ನು ಅಗೆಯಲಾಗಿದೆ. ಆರು ತಿಂಗಳ ರಸ್ತೆಗೆ ಜಲ್ಲಿಕಲ್ಲು ಸುರಿದು ಹಾಗೇ ಬಿಟ್ಟಿರುವುದರಿಂದ ಈ ಸ್ಥಳದಲ್ಲಿ ವಾಹನಗಳು ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗುತ್ತಿವೆ.

ಏ. 9ರಂದು ತೀರ್ಥರಾಮೇಶ್ವರ ಪ್ಲಾಟ್ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಕಾರೊಂದು ರಸ್ತೆ ಬದಿಗೆ ಪಲ್ಟಿಯಾಗಿತ್ತು. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದರು.

ಈಚೆಗೆ ಅದೇ ಸ್ಥಳದಲ್ಲಿ ಲಾರಿ ಮತ್ತು ಬೊಲೆರೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಬೊಲೆರೋ ಜಖಂಗೊಂಡಿದ್ದು, ಲಾರಿ ರಸ್ತೆ ಪಕ್ಕಕ್ಕೆ ಇಳಿದಿದೆ. ದ್ವಿಚಕ್ರ ವಾಹನ ಸವಾರರು ಸಾಕಷ್ಟು ಬಾರಿ ಇಲ್ಲಿ ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದಾರೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ.

ಅರಭಾವಿ-ಚಳ್ಳಕೆರೆ ರಾಜ್ಯ ಹೆದ್ದಾರಿ ದುರಸ್ತಿ ಕೆಲಸ ಸಮರ್ಪಕವಾಗಿ ನಡೆದೇ ಇಲ್ಲ. ಇಟ್ಟಿಗಿ ಬಳಿ ಇತ್ತೀಚಿಗೆ ಡಾಂಬರು ಹಾಕಲಾಗಿದ್ದು, ಸಮತಟ್ಟಾಗಿರದೇ ಉಬ್ಬು ತಗ್ಗು ಮಾಡಲಾಗಿದೆ. ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆಯಾಗಿದೆ.

‘ರಾಜ್ಯ ಹೆದ್ದಾರಿ ರಿಪೇರಿ ಕೆಲಸ ಅಪೂರ್ಣಗೊಳಿಸಿದ್ದಾರೆ. ರಸ್ತೆಗೆ ಜಲ್ಲಿಕಲ್ಲು ಸುರಿದು ಹಾಗೇ ಬಿಟ್ಟಿರುವುದರಿಂದ ವೇಗದಲ್ಲಿ ಬರುವ ವಾಹನಗಳು ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗುತ್ತಿವೆ. ಈ ಬಗ್ಗೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಪ್ರಾಣಹಾನಿ ಸಂಭವಿಸುವ ಮುನ್ನ ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆ ರಿಪೇರಿ ಕೆಲಸ ಪೂರ್ಣಗೊಳಿಸಬೇಕು’ ಎಂದು ಈರುಳ್ಳಿ ಬೆಳೆಗಾರರ ಸಂಘದ ಅಧ್ಯಕ್ಷ ಎನ್.ಎಂ.ಸಿದ್ದೇಶ ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-25-1101848524

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.