ಹೊಸಪೇಟೆ: ಇತ್ತೀಚೆಗೆ ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ಅನಧಿಕೃತವಾಗಿ ಕಾರ್ಮಿಕರ ಗುರುತಿನ ಚೀಟಿ ಬಳಸಿಕೊಂಡು ಅನಾಮಿಕ ವ್ಯಕ್ತಿಗಳು ಕಾರ್ಯ ನಿರ್ವಹಿಸುತ್ತಿರುವುದು ಗಮನಕ್ಕೆ ಬಂದಿದೆ. ಇದು ಕಾನೂನಾತ್ಮಕ ಅಪರಾಧ. ಕಾರ್ಮಿಕರಿಗೆ ವೈಯಕ್ತಿಕ ಸಮಸ್ಯೆಗಳಿದ್ದಲ್ಲಿ ಸ್ವಯಂ ನಿವೃತ್ತಿ ಪಡೆಯಬಹುದು. ಅದಲ್ಲದೇ ತಮ್ಮ ಗುರುತಿನ ಚೀಟಿ ನೀಡಿ ಬೇರೊಬ್ಬರಿಗೆ ಕರ್ತವ್ಯಕ್ಕೆ ನಿಯೋಜಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಹೇಳಿದರು.

ಗುರುವಾರ ಇಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಮ್ಯಾನ್ಯುವಲ್ ಸ್ಕ್ಯಾವೆಂಜರ್ ಅನುಷ್ಠಾನ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಇಂತಹ ಪ್ರಕರಣಗಳು ಕಂಡು ಬಂದಲ್ಲಿ ಅಥವಾ ಮರುಕಳಿಸಿದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಜಿಲ್ಲೆಯಲ್ಲಿನ ಸಫಾಯಿ ಕರ್ಮಚಾರಿ ಕಾರ್ಮಿಕರನ್ನು ಗುರುತಿಸಿ, ಅವರಿಗೆ ಸರ್ಕಾರದ ಯೋಜನೆಗಳನ್ನು ಸಕಾಲಕ್ಕೆ ಒದಗಿಸುವ ಮೂಲಕ ಸಾಮಾಜಿಕ ಮತ್ತು ಆರ್ಥಿಕವಾಗಿ ಮುನ್ನೆಲೆಗೆ ತರಲು ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದರು.

ಸದಸ್ಯರೊಬ್ಬರು ಮಾತನಾಡಿ, ಜಿಲ್ಲೆಯಲ್ಲಿರುವ ಸಫಾಯಿ ಕಾರ್ಮಿಕರಲ್ಲಿ ಕೆಲವರಿಗೆ ರಾಜೀವ್ ಗಾಂಧಿ ವಸತಿ ಯೋಜನೆಯಡಿ ಮನೆ ಮಂಜೂರಾಗಿದ್ದು ನಿವೇಶನ ಕೊರತೆಯಿಂದ ಮನೆ ನಿರ್ಮಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ತ್ವರಿತವಾಗಿ ನಿವೇಶನ ಗುರುತಿಸಿ ಜಾಗ ಕಲ್ಪಿಸಿಕೊಟ್ಟಲ್ಲಿ ಮನೆ ನಿರ್ಮಾಣಕ್ಕೆ ಅನುಕೂಲವಾಗಲಿದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು ಮಲಪನಗುಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ ಗುರುತಿಸಿ ಹಂಚಿಕೆ ಮಾಡಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು.

ಎಸ್ಪಿ ಎಸ್.ಜಾಹ್ನವಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ವೈ.ಎ.ಕಾಳೆ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-25-378979724

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.