ಮಂಗಳವಾರ, ಜನವರಿ 31, 2023
18 °C

ಮದ್ಯ ಅಕ್ರಮ ಸಾಗಣೆ : ಆರೋಪಿಗೆ ಜೈಲು ಶಿಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೂವಿನಹಡಗಲಿ (ವಿಜಯನಗರ ಜಿಲ್ಲೆ): ಆಟೋದಲ್ಲಿ ಅಕ್ರಮವಾಗಿ ಮದ್ಯ ಸಾಗಣೆ ಮಾಡುತ್ತಿದ್ದ ಪಟ್ಟಣದ ಎಂ.ಪ್ರತಾಪ್ ಎಂಬ ಆರೋಪಿಗೆ ಇಲ್ಲಿನ ಜೆಎಂಎಫ್ ಸಿ ನ್ಯಾಯಾಲಯ ಮೂರು ವರ್ಷ ಕಠಿಣ ಜೈಲುಶಿಕ್ಷೆ, 20 ಸಾವಿರ ದಂಡ ವಿಧಿಸಿದೆ.

2016ರಲ್ಲಿ ಪರವಾನಗಿ ಇಲ್ಲದೇ ತನ್ನ ಆಟೋದಲ್ಲಿ 76,066 ರೂ. ಮೌಲ್ಯದ ವಿವಿಧ ಮದ್ಯದ ಬಾಕ್ಸ್ ಗಳನ್ನು ಸಾಗಣೆ ಮಾಡುತ್ತಿರುವಾಗ ಭೀತ್ಯಾನತಾಂಡ ಕ್ರಾಸ್ ಬಳಿ ತಂಬ್ರಹಳ್ಳಿ ಪೊಲೀಸರು ದಾಳಿ ನಡೆಸಿ ವಾಹನ ಸಮೇತ ಮದ್ಯ ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದರು.

ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ವೇಳೆ ಆರೋಪ ಸಾಬೀತಾಗಿದ್ದರಿಂದ ನ್ಯಾಯಾಧೀಶರಾದ ಸಿ.ಕೆ.ವೀರೇಶಕುಮಾರ್ ಅವರು ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 32ರ ಅಡಿ ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಸಹಾಯಕ ಸರ್ಕಾರಿ ಅಭಿಯೋಜಕ ಕೆ.ಅಜ್ಜಯ್ಯ ವಾದ ಮಂಡಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು