ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಮದ್ಯ ವಶ, ಒಬ್ಬನ ಬಂಧನ

Last Updated 14 ಮೇ 2022, 2:21 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ ₹3372 ಮೌಲ್ಯದ ಮದ್ಯವನ್ನು ವಶಪಡಿಸಿಕೊಂಡಿರುವ ಗ್ರಾಮೀಣ ಠಾಣೆ ಪೊಲೀಸರು ಒಬ್ಬನನ್ನು ಬಂಧಿಸಿದ್ದಾರೆ.

ಬಂಧಿತನನ್ನು ತಾಲ್ಲೂಕಿನ ಕೊಂಡನಾಯಕನಹಳ್ಳಿಯ ರವಿ ಪುಂಡಲೀಕ (30) ಎಂದು ಗುರುತಿಸಲಾಗಿದೆ. 8.640 ಲೀಟರ್‌ನ 90 ಎಂ.ಎಲ್‌.ನ ತಲಾ 48 ಒರಿಜಿನಲ್‌ ಚಾಯ್ಸ್‌, ಹೇವರ್ಡ್ಸ್‌ ವಿಸ್ಕಿ ಪ್ಯಾಕೆಟ್‌ಗಳನ್ನು ಮಂಗಳವಾರ ಮಧ್ಯಾಹ್ನ ಬಳ್ಳಾರಿ ರಸ್ತೆಯ ಎಚ್‌ಎಲ್‌ಸಿ ಬಳಿ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲ್ಯವಿವಾಹ, ಪ್ರಕರಣ:

ಅಪ್ರಾಪ್ತ ವಯಸ್ಸಿನ ಬಾಲಕಿಯೊಂದಿಗೆ ಅಪ್ರಾಪ್ತ ಬಾಲಕನೊಬ್ಬ ವಿವಾಹವಾಗಿ ಆಕೆಯನ್ನು ಗರ್ಭಪಾತ ಮಾಡಿಸಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ.

ಬಾಲ್ಯ ವಿವಾಹವನ್ನು ಪ್ರೋತ್ಸಾಹಿಸಿ, ಬಾಲಕಿಯ ಗರ್ಭಪಾತಕ್ಕೆ ಕಾರಣರಾದ ಎರಡೂ ಕುಟುಂಬದವರ ವಿರುದ್ಧ ಶಿಶು ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಕೊಟ್ಟಿರುವ ದೂರಿನ ಮೇರೆಗೆ ಶುಕ್ರವಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT