ಬುಧವಾರ, 19 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಶಾಲೆಗಳ ದಾಖಲಾತಿ ಹೆಚ್ಚಿಸಲು ಸೂಚನೆ

Published 2 ಜೂನ್ 2024, 15:32 IST
Last Updated 2 ಜೂನ್ 2024, 15:32 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಶಾಲಾ ಶಿಕ್ಷಣ ಇಲಾಖೆಯ ಕಲಬುರಗಿ ವಿಭಾಗದ ಹೆಚ್ಚುವರಿ ಆಯುಕ್ತ ಆಕಾಶ ಎಸ್. ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು ಬಿ. ಅವರು ಈಚೆಗೆ ಜಿಲ್ಲೆಯಲ್ಲಿ ವಿವಿಧ ಶಾಲೆಗಳಿಗೆ ಭೇಟಿ ನೀಡಿದರು.

ಟಿ.ಬಿ.ಡ್ಯಾಂನ ಸರ್ಕಾರಿ ಪ್ರೌಢಶಾಲೆ, ಅಮರಾವತಿಯ ಸರ್ಕಾರಿ ಬಾಲಕಿಯರ ಪ್ರೌಢಶಾಲೆಗೆ ಭೇಟಿ ನೀಡಿ,  ಎಸ್ಎಸ್‌ಎಲ್‌ಸಿ ಮುಖ್ಯಪರೀಕ್ಷೆಯಲ್ಲಿ ಅನುತ್ತೀರ್ಣರಾದ ಮಕ್ಕಳಿಗೆ ನಡೆಯುತ್ತಿದ್ದ ಪರಿಹಾರ ಬೋಧನಾ ತರಗತಿಗಳ ಬಗ್ಗೆ ಮಾಹಿತಿ ಪಡೆದರು.

ಚಿತ್ತವಾಡಗಿಯ ವಿನೋಬಾ ಭಾವೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸ್ವಾಮಿ ವಿವೇಕಾನಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಅಕ್ಷರ ಅವಿಷ್ಕಾರ ಯೋಜನೆಯಡಿ ಎಲ್.ಕೆ.ಜಿ ಮತ್ತು ಯು.ಕೆ.ಜಿ., ದ್ವಿಭಾಷಾ ಶಾಲೆಗಳು ಮತ್ತು ಎನ್.ಎಸ್.ಕ್ಯೂ.ಎಫ್. ಶಾಲೆಗಳ ಬಗ್ಗೆ ಮಾಹಿತಿ ನೀಡಿದರು. ಸರ್ಕಾರಿ ಶಾಲೆಗಳ ದಾಖಲಾತಿ ಹೆಚ್ಚಿಸುವ ಬಗ್ಗೆ ಸೂಕ್ತ ಮಾರ್ಗದರ್ಶನ ಮಾಡಿದರು.

ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳ ಅನುಷ್ಠಾನಾಧಿಕಾರಿಗಳ ಸಭೆ ನಡೆಸಿದರು.

ಡಿಡಿಪಿಐ ಯುವರಾಜ ನಾಯ್ಕ, ಡಯಟ್‌ನ ಉಪ ನಿರ್ದೇಶಕರಾದ ಹನುಮಕ್ಕ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT