ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯನಗರ: ನೊಂದವರ ದನಿಯಾಗಿ ‘ಜನನಿ’ ಕೆಲಸ

Last Updated 30 ಜೂನ್ 2022, 14:20 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ‘ನೊಂದವರ ದನಿಯಾಗಿ ‘ಜನನಿ’ ಸಂಸ್ಥೆ ಕೆಲಸ ಮಾಡುತ್ತಿದೆ’ ಎಂದು ಚಿತ್ತವಾಡ್ಗಿ ಠಾಣೆ ಪೊಲೀಸ್‌ ಇನ್‌ಸ್ಪೆಕ್ಟರ್‌ ಎನ್‌. ಸರೋಜ ಹೇಳಿದರು.

ಜನನಿ ಮಹಿಳಾ ಸಬಲೀಕರಣ ಸಮಿತಿಯಿಂದ ಗುರುವಾರ ನಗರದಲ್ಲಿ ಏರ್ಪಡಿಸಿದ್ದ ಕಾನೂನು ಅರಿವು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಒಂದೂವರೆ ವರ್ಷದ ಹಿಂದೆ ಅಸ್ತಿತ್ವಕ್ಕೆ ಬಂದ ಸಂಸ್ಥೆ ಸಮಾಜಮುಖಿಯಾಗಿ ಕೆಲಸ ಮಾಡುತ್ತಿರುವುದು ಸಂತೋಷದ ಸಂಗತಿ ಎಂದರು.

ಸಿಡಿಪಿಒ ಸಿಂಧು ಯಲಿಗಾರ್ ಮಾತನಾಡಿ, ‘ಮಕ್ಕಳು, ಮಹಿಳೆಯರ ಪೌಷ್ಟಿಕತೆ ಹೋಗಲಾಡಿಸುವ ನಿಟ್ಟಿನಲ್ಲಿ ನಮ್ಮ ಇಲಾಖೆ ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸುತ್ತಿದೆ. ಅದಕ್ಕೆ ಜನನಿಯಂತಹ ಸಂಸ್ಥೆಗಳು ಬೆನ್ನೆಲುಬಾಗಿ ಸಹಕಾರ ಕೊಡುತ್ತಿವೆ’ ಎಂದು ಹೇಳಿದರು.

ವಕೀಲರಾದ ಎಸ್.ಪಿ. ಶ್ವೇತಾಂಬರಿ, ವರದಕ್ಷಿಣೆ ಕಿರುಕುಳ, ಆ್ಯಸಿಡ್ ದಾಳಿ, ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಮಾಹಿತಿ ನೀಡಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು. ಸಮಿತಿ ಅಧ್ಯಕ್ಷೆ ಗೀತಾಶಂಕರ, ಸದಸ್ಯರಾದ ಖೈರುನ್ನಿಸಾ, ರೇಣುಕಾ, ಚೈತ್ರಾ, ಪೂರ್ಣಿಮಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT