ಹೊಸಪೇಟೆ (ವಿಜಯನಗರ): ಮಾತೆತ್ತಿದ್ದರೆ ಹೈಕಮಾಂಡ್ ಎಂದು ಹೇಳುತ್ತ, ಕುರ್ಚಿಗೆ ಅಂಟಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಡಿಯೇ ಹೊರತು ಪ್ರಧಾನಿ ನರೇಂದ್ರ ಮೋದಿ ಅವರಲ್ಲ ಎಂದು ಶಾಸಕ ಜನಾರ್ದನ ರೆಡ್ಡಿ ಹೇಳಿದರು.

ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೈಕಮಾಂಡ್ ಹೆಸರು ಹೇಳುತ್ತಲೇ ಕುರ್ಚಿ ಬಿಡಲು ಹಿಂದೇಟು ಹಾಕುತ್ತಿರುವ ಸಿದ್ದರಾಮಯ್ಯ ಅವರಿಂದ ರಾಜ್ಯದ ಅಭಿವೃದ್ಧಿ ಸಂಪೂರ್ಣ ಸ್ಥಗಿತಗೊಂಡಿದೆ, ಅವರು ಇನ್ನು ಮುಂದೆಯೂ ಸಿಎಂ ಸ್ಥಾನ ಬಿಟ್ಟುಕೊಡುವ ಲಕ್ಷಣ ಇಲ್ಲ, ಜತೆಗೆ ರಾಜ್ಯದ ಅಭಿವೃದ್ಧಿಗೂ ಸಾಧ್ಯವಾಗುವುದಿಲ್ಲ. ಇದೆಲ್ಲದರ ಪರಿಣಾಮವಾಗಿ 2028ರಲ್ಲಿ ರಾಜ್ಯದಲ್ಲಿ ಬಿಜೆಪಿಯೇ ಅಧಿಕಾರಕ್ಕೆ ಬರಲಿದೆ ಎಂದರು.

‘ಬಳ್ಳಾರಿಯಲ್ಲಿ ನಡೆದ ಗುಂಡು ಹಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಯ ಬಗ್ಗೆ ನನಗೆ ನಂಬಿಕೆಯೇ ಇಲ್ಲ. ದಾಖಲೆಗಳನ್ನು ಸಂಗ್ರಹಿಸಿದ್ದು, ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿ ಎರಡು ದಿನದಲ್ಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಿದ್ದೇನೆ’ ಎಂದು ರೆಡ್ಡಿ ಹೇಳಿದರು.

ಗಂಗಾವತಿಯಿಂದಲೇ ಸ್ಪರ್ಧೆ: ‘ನನಗೆ ರಾಜಕೀಯವಾಗಿ ಪುನರ್ಜನ್ಮ ನೀಡಿದ ಗಂಗಾವತಿ ಕ್ಷೇತ್ರವನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ಆದರೆ ಮುಂದೆ ಬಿಜೆಪಿಯೇ ಸರ್ಕಾರ ರಚಿಸಲಿರುವ ಕಾರಣ ಗಂಗಾವತಿ ಜತೆಗೆ ಹೊಸಪೇಟೆ, ಹಂಪಿಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಈಗಿನಿಂದಲೇ ಯೋಜನೆ ಹಾಕಿಕೊಂಡಿದ್ದೇನೆ, ಈ ಹಿಂದೆ ಹಾಕಿದ್ದ ಯೋಜನೆಗಳು ಕಾರ್ಯಗತಗೊಳ್ಳಲಿಲ್ಲ, ಮುಂದೆ ಆ ಯೋಜನೆಗಳೆಲ್ಲ ಕಾರ್ಯಗತಗೊಳ್ಳಲಿವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.