ಶನಿವಾರ, 9 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೂವಿನಹಡಗಲಿ: ಅ.30ರಂದು ಜನತಾ ದರ್ಶನ

ಅಗತ್ಯ ಸಿದ್ಧತೆಗಾಗಿ ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಶರಣಮ್ಮ ಸೂಚನೆ
Published 27 ಅಕ್ಟೋಬರ್ 2023, 14:01 IST
Last Updated 27 ಅಕ್ಟೋಬರ್ 2023, 14:01 IST
ಅಕ್ಷರ ಗಾತ್ರ

ಹೂವಿನಹಡಗಲಿ: ಇಲ್ಲಿನ ಪ್ರವಾಸಿ ಮಂದಿರದಲ್ಲಿ ಅ.30ರಂದು ಬೆಳಿಗ್ಗೆ 10.30ಕ್ಕೆ ಜನತಾ ದರ್ಶನ ಕಾರ್ಯಕ್ರಮ ನಿಗದಿಯಾಗಿದ್ದು, ಎಲ್ಲ ಇಲಾಖೆಗಳ ಮುಖ್ಯಸ್ಥರು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಹಶೀಲ್ದಾರ್ ಕೆ.ಶರಣಮ್ಮ ಸೂಚಿಸಿದರು.

ತಾಲ್ಲೂಕು ಕಚೇರಿಯಲ್ಲಿ ಶುಕ್ರವಾರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರಿಂದ ಸ್ವೀಕೃತವಾಗುವ ಅಹವಾಲುಗಳನ್ನು ಕಡ್ಡಾಯವಾಗಿ ಇ-ಆಫೀಸ್ ತಂತ್ರಾಂಶದಲ್ಲಿ ಅಪ್‌ಲೋಡ್ ಮಾಡಬೇಕು. ಸಲ್ಲಿಕೆಯಾಗುವ ಪ್ರತಿ ಅರ್ಜಿಯನ್ನೂ ಗಂಭೀರವಾಗಿ ಪರಿಗಣಿಸಿ, ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಇತ್ಯರ್ಥಪಡಿಸಲು ಕ್ರಮ ವಹಿಸಬೇಕು. ಎಲ್ಲ ಇಲಾಖೆಗಳಿಂದ ಕೌಂಟರ್ ತೆರೆದು, ಅರ್ಜಿ ಸ್ವೀಕರಿಸಲು ನುರಿತ ಆಪರೇಟರ್‌ಗಳನ್ನು ನಿಯೋಜಿಸಬೇಕು ಎಂದು ತಿಳಿಸಿದರು.

‘ಕೃಷಿ ಇಲಾಖೆ, ಮಹಿಳಾ ಮತ್ತು ಮಕ್ಕಳು ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ಇಲಾಖೆಯ ಯೋಜನೆಗಳನ್ನು ಪ್ರಚುರಪಡಿಸಬೇಕು’ ಎಂದು ಹೇಳಿದರು.

ಅಹವಾಲು ಸಲ್ಲಿಕೆಗೆ ಬರುವ ಸಾರ್ವಜನಿಕರಿಗೆ ಮೂಲಸೌಕರ್ಯ ವ್ಯವಸ್ಥೆ ಮಾಡಬೇಕು. ಯಾವುದೇ ಅಡಚಣೆಯಾಗದಂತೆ ಎಲ್ಲ ಅಧಿಕಾರಿಗಳು ಸಮನ್ವಯದಿಂದ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜಯರಾಂ ಚವ್ಹಾಣ, ಪಂಚಾಯತ್‌ರಾಜ್ ಎಂಜಿನಿಯರಿಂಗ್ ಉಪವಿಭಾಗದ ಎಇಇ ಮಹೇಶಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ ಪೂಜಾರ, ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆ ಎಇಇ ಅಂಬೇಡ್ಕರ್, ಸಮಾಜ ಕಲ್ಯಾಣಾಧಿಕಾರಿ ಆನಂದ ಡೊಳ್ಳಿನ, ಸಿಡಿಪಿಒ ಅವಿನಾಶ, ಬಿಸಿಎಂ ವಿಸ್ತರಣಾಧಿಕಾರಿ ಎಂ.ಪಿ.ಎಂ. ಅಶೋಕ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT