ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೂಡ್ಲಿಗಿ: ಮಾಜಿ ಶಾಸಕ ಎನ್.ಟಿ. ಬೊಮ್ಮಣ್ಣ ನಿಧನ

Last Updated 12 ಅಕ್ಟೋಬರ್ 2022, 13:23 IST
ಅಕ್ಷರ ಗಾತ್ರ

ಕೂಡ್ಲಿಗಿ (ವಿಜಯನಗರ ಜಿಲ್ಲೆ): ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ, ಜೆಡಿಎಸ್ ಮುಖಂಡ ಎನ್.ಟಿ. ಬೊಮ್ಮಣ್ಣ (79) ಬುಧವಾರ ನಿಧನರಾದರು.

ಮೃತರಿಗೆ ಪತ್ನಿ, ಇಬ್ಬರು ಪುತ್ರರು, ಮೂರು ಜನ ಪುತ್ರಿಯರು ಇದ್ದಾರೆ. ಅನೇಕ ದಿನಗಳಿಂದ ತುಮಕೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬುಧವಾರ ಮಧ್ಯಾಹ್ನ 1ಕ್ಕೆ ನಿಧನರಾದರು. ಅವರ ಸ್ವಗ್ರಾಮ ತಾಲ್ಲೂಕಿನ ನರಸಿಂಹಗಿರಿ ಗ್ರಾಮದಲ್ಲಿ ಗುರುವಾರ (ಅ. 13) ಮಧ್ಯಾಹ್ನ 1ಕ್ಕೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

1978ರಲ್ಲಿ ತಾಲ್ಲೂಕು ಬೋರ್ಡ್‌ ಅಧ್ಯಕ್ಷರಾಗಿದ್ದ ಬೊಮ್ಮಣ್ಣನವರು 1985, 1989ರಲ್ಲಿ ಎರಡು ಬಾರಿ ಕೂಡ್ಲಿಗಿ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಶಾಸಕರಾಗಿದ್ದರು. 1999ರಲ್ಲಿ ಕೂಡ್ಲಿಗಿ ಕ್ಷೇತ್ರದಲ್ಲಿ ಬಿಜೆಪಿಯಿಂದ, 2004ರಲ್ಲಿ ಜೆಡಿಎಸ್‍ನಿಂದ ಕೊಟ್ಟೂರು ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು. ಕ್ಷೇತ್ರ ಮರು ವಿಂಗಡಣೆಯಾದ ನಂತರ 2008, 2013ರ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ.

ನಂತರ ಜೆಡಿಎಸ್ ಸೇರಿ ಜಿಲ್ಲಾಧ್ಯಕ್ಷರಾಗಿದ್ದ ಅವರು, 2018ರ ಚುನಾವಣೆಯಲ್ಲಿ ಕೂಡ್ಲಿಗಿ ಕ್ಷೇತ್ರದಿಂದ ಜೆಡಿಎಸ್ ನಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು.

ನರಸಿಂಹಗಿರಿ ವಿದ್ಯಾ ಸಂಸ್ಥೆ ಹುಟ್ಟು ಹಾಕಿ, 8 ಪ್ರೌಢಶಾಲೆ, 7 ಪ್ರಾಥಮಿಕ ಶಾಲೆಗಳನ್ನು ಆರಂಭಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT