ಶನಿವಾರ, ಆಗಸ್ಟ್ 13, 2022
26 °C

ಹೊಸಪೇಟೆ: ತೈಲ ದರ ಏರಿಕೆ ವಿರೋಧಿಸಿ ಜೆಡಿಎಸ್‌ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ (ವಿಜಯನಗರ): ಸತತವಾಗಿ ಪೆಟ್ರೋಲ್‌, ಡೀಸೆಲ್‌ ದರ ಹೆಚ್ಚಿಸುತ್ತಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಜೆಡಿಎಸ್‌ ಕಾರ್ಯಕರ್ತರು ಗುರುವಾರ ನಗರದ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕೋವಿಡ್‌ ಲಾಕ್‌ಡೌನ್‌ನಿಂದ ಜನಸಾಮಾನ್ಯರ ಬದುಕು ಮೂರಾಬಟ್ಟೆಯಾಗಿದೆ. ಬಡವರು, ಕೆಳ ಮಧ್ಯಮ ವರ್ಗದವರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಒಂದು ಹೊತ್ತು ಹೊಟ್ಟೆ ತುಂಬಿಸಿಕೊಳ್ಳಲು ಒದ್ದಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಹೆಚ್ಚಿಸಿರುವುದು ಸರಿಯಲ್ಲ. ತೈಲ ದರ ಏರಿಕೆಯಿಂದ ಎಲ್ಲ ರೀತಿಯ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿರುವುದರಿಂದ ಜನಸಾಮಾನ್ಯರು ಜೀವನ ನಡೆಸಲು ತೊಂದರೆಯಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರಿಗೆ ಬರೆದ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಕೋವಿಡ್‌ನಿಂದ ಅನೇಕರು ಅವರ ರಕ್ತಸಂಬಂಧಿಗಳನ್ನು, ಕುಟುಂಬಕ್ಕೆ ಆಧಾರವಾಗಿದ್ದವರನ್ನು ಕಳೆದುಕೊಂಡಿದ್ದಾರೆ. ಇನ್ನಷ್ಟೇ ಅವರು ಆ ದುಃಖದಿಂದ ಹೊರಬಂದು, ಆರ್ಥಿಕವಾಗಿ ಚೇತರಿಸಿಕೊಳ್ಳಬೇಕಿದೆ. ಆದರೆ, ಸರ್ಕಾರ ಪೆಟ್ರೋಲ್‌, ಡೀಸೆಲ್‌ ಸೇರಿದಂತೆ ಎಲ್ಲ ರೀತಿಯ ವಸ್ತುಗಳ ಬೆಲೆ ಹೆಚ್ಚಿಸಿ, ಅವರನ್ನು ನಿರ್ನಾಮ ಮಾಡಲು ಹೊರಟಿರುವುದು ಖಂಡನೀಯ. ಕೂಡಲೇ ತೈಲ ದರ, ಅಗತ್ಯ ವಸ್ತುಗಳ ಬೆಲೆ ಇಳಿಸಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು. ಇಲ್ಲವಾದಲ್ಲಿ ಪಕ್ಷದಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಪಕ್ಷದ ಮುಖಂಡರಾದ ಕೆ. ಕೋಟ್ರೇಶ್, ಅತಾಯ ರಸೂಲ್, ನಬಿ ಸಾಬ್, ಕೆ. ಕೃಷ್ಣ, ಎ.ನಾರಾಯಣ, ಬಿ.ಎಂ. ಹುಲುಗಪ್ಪ, ಗಾಳಿ ನಾಗರಾಜ, ಸೋಮಶೇಖರ್, ಡಿ.ಮೊಹಮ್ಮದ್ ರಫೀಕ್, ಇನಾಯತ್ ಡೇಗಲ್, ಎಚ್.ಎಂ. ಪ್ರಶಾಂತ್, ಚಂದ್ರಕಾಂತ್, ರಾಜಶೇಖರ್ ಗೌಡ, ಎಚ್. ಶಬ್ಬೀರ್, ರಾಜಾ ಹುಸೇನ್, ಕಾಶಿ, ನವೀನ್‌, ರಮೇಶ್‌ ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು