ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಗಮೋಹನದಾಸ್‌ ವರದಿ ಜಾರಿಗೆ ದಲಿತ ಹಕ್ಕುಗಳ ಜನಪರ ಸಂಘಟನೆಗಳ ಒಕ್ಕೂಟ ಆಗ್ರಹ

Last Updated 18 ಅಕ್ಟೋಬರ್ 2021, 9:18 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಜನಸಂಖ್ಯೆಗೆ ತಕ್ಕಂತೆ ಮೀಸಲಾತಿ ಹೆಚ್ಚಿಸಬೇಕೆಂಬ ಉದ್ದೇಶದಿಂದ ರಚಿಸಿದ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನದಾಸ್‌ ಆಯೋಗ ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಜಾರಿಗೆ ತರಬೇಕೆಂದು ಆಗ್ರಹಿಸಿ ದಲಿತ ಹಕ್ಕುಗಳ ಜನಪರ ಸಂಘಟನೆಗಳ ಒಕ್ಕೂಟದವರು ಸೋಮವಾರ ನಗರದ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್‌ಗೆ ಸಲ್ಲಿಸಿದರು.

ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಜನಸಂಖ್ಯೆ ಶೇ 25ಕ್ಕಿಂತ ಹೆಚ್ಚಿದೆ. ಹೀಗಿದ್ದರೂ ಅವರು ಅನೇಕ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಕನಿಷ್ಠ ಶಿಕ್ಷಣ, ಉದ್ಯೋಗ, ಕೃಷಿ ಜಮೀನು, ವಸತಿ ವ್ಯವಸ್ಥೆ ಸಿಕ್ಕಿಲ್ಲ. ಕೂಡಲೇ ನಾಗಮೋಹನದಾಸ್‌ ವರದಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಬ್ಯಾಕ್‌ಲಾಗ್‌ ಹುದ್ದೆಗಳನ್ನು ತುಂಬಬೇಕು. ನಿರುದ್ಯೋಗಿ ಯುವಕರಿಗೆ ನಿರುದ್ಯೋಗ ಭತ್ಯೆ ಕೊಡಬೇಕು. ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 2.75 ಲಕ್ಷ ಹುದ್ದೆಗಳನ್ನು ತುಂಬಬೇಕು. ಅರಣ್ಯ ಜಮೀನಿನಲ್ಲಿ ಉಳುಮೆ ಮಾಡುತ್ತಿರುವವರಿಗೆ ಹಕ್ಕು ಪತ್ರ ಕೊಡುವುದು ಪ್ರಮುಖ ಬೇಡಿಕೆಗಳಾಗಿವೆ.

ಒಕ್ಕೂಟದ ಮುಖಂಡರಾದ ಮರಡಿ ಜಂಬಯ್ಯ ನಾಯಕ, ಪ್ರೊ. ಎನ್‌. ಚಿನ್ನಸ್ವಾಮಿ ಸೋಸಲೆ, ಸೋಮಶೇಖರ್‌ ಬಣ್ಣದಮನೆ, ತಾಯಪ್ಪ ನಾಯಕ, ಸಣ್ಣಕ್ಕಿ ರುದ್ರಪ್ಪ, ಜೆ. ಶಿವುಕುಮಾರ, ಸೋಮಶೇಖರ್ ಘಂಟೆ, ದುರುಗಪ್ಪ ಪೂಜಾರಿ ಮೊದಲಾದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT