ಶುಕ್ರವಾರ, ಅಕ್ಟೋಬರ್ 22, 2021
29 °C

ವಿಜಯನಗರ ಜಿಲ್ಲಾ ಪಂಚಾಯಿತಿಗೆ ಕೆ.ಎಂ. ಗಾಯತ್ರಿ ನೂತನ ಸಿಇಒ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ಕೆ.ಎಂ. ಗಾಯತ್ರಿ ಅವರನ್ನು ನೂತನ ವಿಜಯನಗರ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

ಗಾಯತ್ರಿ ಅವರು ಮೈಸೂರಿನ ಅಬ್ದುಲ್‌ ನಜೀರ್‌ ಸಾಬ್‌ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಸಂಸ್ಥೆಯ ನಿರ್ದೇಶಕಿಯಾಗಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಅವರನ್ನು ವಿಜಯನಗರ ಜಿಲ್ಲೆಗೆ ನೇಮಕ ಮಾಡಲಾಗಿದೆ.

ವಿಜಯನಗರ ಜಿಲ್ಲೆಯ ಉದ್ಘಾಟನಾ ಸಮಾರಂಭ ಅ. 2ರಂದು ನಡೆಯಲಿದೆ. ಅದಕ್ಕೂ ಒಂದು ದಿನ ಮುಂಚಿತವಾಗಿ ಅವರ ನೇಮಕ ನಡೆದಿದೆ. ಶುಕ್ರವಾರ ನೂತನ ಜಿಲ್ಲಾಧಿಕಾರಿಯಾಗಿ ಅನಿರುದ್ಧ್‌ ಪಿ. ಶ್ರವಣ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅರುಣ್‌ ಕೆ. ಅವರನ್ನು ಸರ್ಕಾರ ನೇಮಿಸಿತ್ತು. ಇದರೊಂದಿಗೆ ಹೊಸ ಜಿಲ್ಲೆಯ ಮೂರು ಪ್ರಮುಖ ಹುದ್ದೆಗಳಿಗೆ ಅಧಿಕಾರಿಗಳ ನೇಮಕ ಪ್ರಕ್ರಿಯೆ ಪೂರ್ಣಗೊಂಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು