ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಮಟ್ಟದ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಕಮಲಾಪುರ ಸಜ್ಜು

Published 3 ಮಾರ್ಚ್ 2024, 4:21 IST
Last Updated 3 ಮಾರ್ಚ್ 2024, 4:21 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ತಾಲ್ಲೂಕಿನ ಕಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರ ರಾಜ್ಯ ಮಟ್ಟದ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಸಜ್ಜಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೀಘ್ರ ಚಾಲನೆ ನೀಡಲಿದ್ದಾರೆ.

ಕನಕಗಿರಿ ಉತ್ಸವದಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಅವರು ಶನಿವಾರ ರಾತ್ರಿ ಇಲ್ಲಿನ ಇವಾಲ್ವ್ ಬ್ಲಾಕ್ ರೆಸಾರ್ಟ್‌ನಲ್ಲಿ ತಂಗಿದ್ದರು.

ಶಾಸಕ ಈ. ತುಕಾರಾಂ ಅವರ ಪುತ್ರಿಯ ವಿವಾಹ ಇಲ್ಲಿಗೆ ಸಮೀಪದ ವಿಜಯಶ್ರೀ ರೆಸಾರ್ಟ್‌ನಲ್ಲಿ ನಡೆಯುತ್ತಿದ್ದು, ಅಲ್ಲಿಗೆ ಹೋಗಿ ವಧೂವರರಿಗೆ ಶುಭಾಶಯ ಕೋರಲಿರುವ ಮುಖ್ಯಮಂತ್ರಿ ಅವರು ಬಳಿಕ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಮುಖ್ಯಮಂತ್ರಿ ಅವರು ಬಳಿಕ ಹೆಲಿಕಾಪ್ಟರ್‌ನಲ್ಲಿ ಚಿಕ್ಕಮಗಳೂರಿನತ್ತ ತೆರಳಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT