ಸೋಮವಾರ, ಅಕ್ಟೋಬರ್ 18, 2021
24 °C

ಕಾನಾಹೊಸಹಳ್ಳಿ: ಅಪಘಾತದಲ್ಲಿ ಗಾಯಗೊಂಡವರಿಗೆ ನಟ ಅಜಯ್‌ ರಾವ್‌ ಪ್ರಥಮ ಚಿಕಿತ್ಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾನಾಹೊಸಹಳ್ಳಿ (ವಿಜಯನಗರ ಜಿಲ್ಲೆ): ಕೂಡ್ಲಿಗಿ ತಾಲ್ಲೂಕಿನ ಕಾನಾಹೊಸಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಸೋಮವಾರ ಸಂಜೆ ಅಪಘಾತದಲ್ಲಿ ಗಾಯಗೊಂಡವರಿಗೆ ನಟ ಅಜಯ್‌ ರಾವ್‌ ಪ್ರಥಮ ಚಿಕಿತ್ಸೆ ನೀಡಿ ನೆರವಾಗಿದ್ದಾರೆ.

ಮೈಸೂರಿನಿಂದ ಹೊಸಪೇಟೆ ಕಡೆಗೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಪಲ್ಟಿ ಆಗಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇದೇ ಮಾರ್ಗದಿಂದ ಬೆಂಗಳೂರಿಗೆ ಹೋಗುತ್ತಿದ್ದ ನಟ ಅಜಯ್‌ ರಾವ್‌ ಗಾಯಗೊಂಡವರನ್ನು ಗಮನಿಸಿ, ಕಾರು ನಿಲ್ಲಿಸಿ, ಅವರ ಕಾರಿನಲ್ಲಿದ್ದ ಪ್ರಥಮ ಚಿಕಿತ್ಸೆಯ ಪೆಟ್ಟಿಗೆಯೊಳಗಿಂದ ಔಷಧ ತೆಗೆದುಕೊಂಡು ಹೋಗಿ ಉಪಚರಿಸಿದ್ದಾರೆ. ಬಳಿಕ ಅಲ್ಲಿಗೆ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿ ಬಂದು, ಹೆಚ್ಚಿನ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು