ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೂವಿನಹಡಗಲಿ | ಮಾತೃಭಾಷೆಯಲ್ಲಿ ವಿಜ್ಞಾನ ಕಲಿಕೆ ಪರಿಣಾಮಕಾರಿ: ಕಾಗಲಿ

Published 6 ಡಿಸೆಂಬರ್ 2023, 13:45 IST
Last Updated 6 ಡಿಸೆಂಬರ್ 2023, 13:45 IST
ಅಕ್ಷರ ಗಾತ್ರ

ಹೂವಿನಹಡಗಲಿ: ‘ವಿಜ್ಞಾನ ಅಧ್ಯಾಪಕರು ಪಠ್ಯ ವಿಷಯ ಬೋಧನೆಗೆ ಸೀಮಿತವಾಗದೇ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವವನ್ನು ಜಾಗೃತಗೊಳಿಸಬೇಕು’ ಎಂದು ಬೆಂಗಳೂರಿನ ನಿವೃತ್ತ ಪ್ರಾಚಾರ್ಯ ಡಾ. ಎಸ್.ಸೋಮಶೇಖರ್ ಹೇಳಿದರು.

ಇಲ್ಲಿನ ಜಿಬಿಆರ್ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸೆ ಕೋಶದಿಂದ ಬುಧವಾರ ಆಯೋಜಿಸಿದ್ದ ವಿಶೇಷ ಉಪನ್ಯಾಸ ಮಾಲಿಕೆ ಹಾಗೂ ಪ್ರೌಢಶಾಲಾ ವಿಜ್ಞಾನ ಶಿಕ್ಷಕರ ಕಾರ್ಯಾಗಾರದಲ್ಲಿ ಅವರು ಉಪನ್ಯಾಸ ನೀಡಿದರು.

‘ಪ್ರತಿ ವಿದ್ಯಾರ್ಥಿಯಲ್ಲೂ ವಿಜ್ಞಾನ ಕುರಿತು ಕುತೂಹಲ ಇರುತ್ತದೆ. ಶಿಕ್ಷಕರು ಅವರ ಚಿಂತನೆಗಳನ್ನು ಗಮನಿಸಿ, ಪ್ರಯೋಗಾತ್ಮಕ ಕಲಿಕೆಗೆ ಅಣಿಗೊಳಿಸಬೇಕು. ಶಿಕ್ಷಕರು ವಿಜ್ಞಾನವನ್ನು ಸರಿಯಾದ ರೀತಿಯಲ್ಲಿ ಕಲಿಸಿದರೆ ಭವಿಷ್ಯದಲ್ಲಿ ಅವರು ದೇಶದ ಅಭಿವೃದ್ಧಿಗೆ ಕೊಡುಗೆ ನೀಡುವವರಾಗುತ್ತಾರೆ. ಮಕ್ಕಳಲ್ಲಿ ಪ್ರಶ್ನಿಸುವ ಮನೋಭಾವ ಬೆಳೆಸಿ, ಪ್ರಯೋಗಾತ್ಮಕ ಕಲಿಕಾ ವಾತಾವರಣ ರೂಪಿಸಿಕೊಡಬೇಕು’ ಎಂದು ತಿಳಿಸಿದರು.

ಬೆಂಗಳೂರು ವಿಶ್ವವಿದ್ಯಾಲಯ ನಿವೃತ್ತ ಪ್ರಾಧ್ಯಾಪಕ ಡಾ. ಬಸವರಾಜ ಕಾಗಲಿ ಚಾಲನೆ ನೀಡಿ, ‘ಮಾತೃಭಾಷೆಯಲ್ಲಿ ವಿಜ್ಞಾನ ಕಲಿಕೆ ಪರಿಣಾಮಕಾರಿಯಾಗಿರುತ್ತದೆ. ವಿಜ್ಞಾನ ವಿಷಯವನ್ನು ಕನ್ನಡದಲ್ಲೂ ಕಲಿಯುವಂತಾಗಬೇಕು’ ಎಂದು ಹೇಳಿದರು.

ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಅಕ್ಕಿ ಶಿವಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಪ್ರಾಚಾರ್ಯ ಎಸ್.ಎಸ್. ಪಾಟೀಲ್ ಮಾತನಾಡಿದರು. ಪದವಿಪೂರ್ವ ಕಾಲೇಜು ಪ್ರಾಚಾರ್ಯ ಅಮರೇಗೌಡ ಎನ್.ಪಾಟೀಲ್, ಉಪನ್ಯಾಸಕ ಎಂ.ಸದಾಶಿವ, ಡಾ. ವೈ.ಚಂದ್ರಬಾಬು, ಬಿ.ಮಲ್ಲಿಕಾರ್ಜುನ, ಡಾ. ಮಹಿಮಾಜ್ಯೋತಿ, ಅನ್ನಪೂರ್ಣ, ಕುಸುಮಾ, ಶ್ವೇತಾ ಹಾಗೂ ತಾಲ್ಲೂಕಿನ ವಿವಿಧ ಪ್ರೌಢಶಾಲೆಗಳ ವಿಜ್ಞಾನ ಶಿಕ್ಷಕರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT