ಶನಿವಾರ, ಸೆಪ್ಟೆಂಬರ್ 18, 2021
27 °C

ದೇವರ ಮುಹೂರ್ತ, ನನ್ನ ನಕ್ಷತ್ರ ನೋಡಿಕೊಂಡು ಖಾತೆ ಸ್ವೀಕರಿಸುತ್ತೇನೆ: ಆನಂದ್ ಸಿಂಗ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ‘ಮುಹೂರ್ತ ನೋಡಿ ಖಾತೆ ಸ್ವೀಕರಿಸುವೆ. ದೇವರ ಮುಹೂರ್ತ, ನನ್ನ ನಕ್ಷತ್ರ ನೋಡಿಕೊಂಡು ಖಾತೆ ಸ್ವೀಕರಿಸುತ್ತೇನೆ’ ಎಂದು ಸಚಿವ ಆನಂದ್ ಸಿಂಗ್ ತಿಳಿಸಿದರು.

ಭಾನುವಾರ ನಗರದ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ನಂತರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

‘ರಾಜ್ಯದಲ್ಲಿ ದಿಟ್ಟ, ಸಮರ್ಥ ಅಧಿಕಾರಿಗಳಿದ್ದಾರೆ. ಅಲ್ಲಿಯವರೆಗೆ ಅವರು ಖಾತೆ ನೋಡುತ್ತಾರೆ. ನಾನು ಅಧಿಕಾರ ವಹಿಸಿಕೊಳ್ಳದಿದ್ದರೆ ಅಭಿವೃದ್ಧಿ ಕುಂಠಿತವಾಗುವುದಿಲ್ಲ. ಜನಪ್ರತಿನಿಧಿಗಳ ಮೇಲೆ ವ್ಯವಸ್ಥೆ ನಡೀತಾ ಇಲ್ಲ. ಶಾಸಕಾಂಗ, ಕಾರ್ಯಾಂಗ ಬಂಡಿ ಇದ್ದಂತೆ’ ಎಂದರು.

ಇದನ್ನೂ ಓದಿ... ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ 14 ಹೊಸ ಯೋಜನೆ ಘೋಷಿಸಿದ ಸಿಎಂ ಬೊಮ್ಮಾಯಿ

‘ವಿಜಯನಗರ ಜಿಲ್ಲೆಯಲ್ಲಿ ಕಚೇರಿಗಳ ನಿರ್ಮಾಣ, ಅಧಿಕಾರಿಗಳ ನೇಮಕ ಪ್ರಕ್ರಿಯೆ ನಡೆದಿದೆ. ಆರ್ಥಿಕ ಇಲಾಖೆಯಿಂದ ಈಗಾಗಲೇ ಜಿಲ್ಲೆಗೆ  50 ಕೋಟಿ ಬಿಡುಗಡೆಯಾಗಿದೆ. ಖಾತೆ ಗೊಂದಲದ ಬಗ್ಗೆ ನಾನೇನೂ ಹೇಳಲಾರೆ’ ಎಂದು ಹೇಳಿ ನಿರ್ಗಮಿಸಿದರು.

ಆನಂದ್ ಸಿಂಗ್ ಅವರಿಗೆ ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಖಾತೆ ಹಂಚಿಕೆ ಮಾಡಲಾಗಿದೆ. ಆದರೆ, ಇದುವರೆಗೆ ಅವರು ಖಾತೆ ವಹಿಸಿಕೊಂಡಿಲ್ಲ.

ಇದನ್ನೂ ಓದಿ... ಮೇಕೆದಾಟು ಯೋಜನೆ ಅನುಷ್ಠಾನ ಖಚಿತ: ಸಿಎಂ ಬೊಮ್ಮಾಯಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು