ಹೊಸಪೇಟೆ (ವಿಜಯನಗರ): ರಾಜ್ಯದಲ್ಲಿ ಮಾದಿಗರು ಆರ್ಥಿಕವಾಗಿ,ಶೈಕ್ಷಣಿಕವಾಗಿ ತೀರಾ ಹಿಂದುಳಿದಿದ್ದು, ಅವರನ್ನು ಸಂಘಟಿಸುವ ಒಂದು ಪ್ರಯತ್ನ ‘ಕರ್ನಾಟಕ ಮಾದಾರ ಮಹಾಸಭಾ’ ಮೂಲಕ ಆರಂಭವಾಗಿದೆ. ಪ್ರತಿ ಜಿಲ್ಲೆಯಲ್ಲಿ ಪಕ್ಷಾತೀತವಾಗಿ ಸದಸ್ಯತ್ವ ಅಭಿಯಾನಕ್ಕೆ ಚುರುಕು ನೀಡಲಾಗಿದೆ ಎಂದು ಮಾಜಿ ಸಚಿವರೂ ಆಗಿರುವ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಎಚ್.ಆಂಜನೇಯ ಹೇಳಿದರು.

ಇಲ್ಲಿ ಶುಕ್ರವಾರ ಸದಸ್ಯತ್ವ ಅಭಿಯಾನದಲ್ಲಿ ಪಾಲ್ಗೊಳ್ಳುವುದಕ್ಕೆ ಮೊದಲಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹಾಸಭಾ ವತಿಯಿಂದ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಕಾಲೇಜು ಸ್ಥಾಪಿಸುವ ಉದ್ದೇಶ ಇದೆ, ಇದಕ್ಕಾಗಿ ಬೆಂಗಳೂರು ಸುತ್ತಮುತ್ತ 30 ಎಕರೆ ನಿವೇಶನ ಒದಗಿಸಲು ಸರ್ಕಾರವನ್ನು ಕೇಳಿಕೊಂಡಿದ್ದೇವೆ ಎಂದರು.

ಮಹಾಸಭಾವನ್ನು ಇತರ ಜಾತಿಗಳ ಮಹಾಸಭಾದಂತೆ ಪ್ರಜಾಸತ್ತಾತ್ಮಕ ರೀತಿಯಲ್ಲೇ ರಚಿಸಲಾಗುವುದು. ಮಾದಿಗರ ಒಗ್ಗಟ್ಟು, ಶಕ್ತಿ ಸಂಚಯಕ್ಕೆ ಈ ರೀತಿಯ ಸಂಘಟನೆ ಬಹಳ ಅಗತ್ಯ. ಮಹಾಸಭಾವು ಸಚಿವ ಕೆ.ಎಚ್.ಮುನಿಯಪ್ಪ ಅವರ ಅಧ್ಯಕ್ಷತೆಯಲ್ಲಿ ತನ್ನ ಪಯಣ ಆರಂಭಿಸಿದೆ, ಸದ್ಯ ಎಲ್ಲಾ ಜಿಲ್ಲೆಗಳಲ್ಲಿ ಹಂಗಾಮಿ ಅಧ್ಯಕ್ಷರು, ತಾಲ್ಲೂಕು ಅಧ್ಯಕ್ಷರನ್ನು ನೇಮಿಸಿ, ಮುಂದಿನ ದಿನಗಳಲ್ಲಿ ಚುನಾವಣೆ ಮೂಲಕ ಆಯ್ಕೆ ಮಾಡಲಾಗುವುದು ಎಂದರು.

ಒಳಮೀಸಲಾತಿಯಿಂದ ನೆಮ್ಮದಿ: ಸರ್ಕಾರ ಒಳಮೀಸಲಾತಿ ವಿಚಾರದಲ್ಲಿ ಇಟ್ಟಿರುವ ಹೆಜ್ಜೆ, ತೆಗೆದುಕೊಂಡಿರುವ ನಿರ್ಧಾರಗಳು ಸ್ವಾಗತಾರ್ಹ. ಆದರೆ 15 ಹುದ್ದೆಗಳಿಗಿಂತ ಕಡಿಮೆ ಇರುವ ಹುದ್ದೆಗಳಿಗೆ ಒಳಮೀಸಲಾತಿ ಅನ್ವಯ ಆಗುವುದಿಲ್ಲ ಎಂಬ ಸರ್ಕಾರದ ನಿರ್ಧಾರಕ್ಕೆ ನಮ್ಮ ಪ್ರಬಲ ಆಕ್ಷೇಪ ವ್ಯಕ್ತಪಡಿಸಿದ್ದೇವೆ. ಇದನ್ನು ಸಹ ಸರಿಪಡಿಸುವುದಾಗಿ ಮುಖ್ಯಮಂತ್ರಿ ಅವರು ಭರವಸೆ ನೀಡಿದ್ದಾರೆ ಎಂದರು.

ಮಾದಿಗ ಸಮಾಜದ ಮುಖಂಡರಾದ ಹಿರಣ್ಯಯ್ಯ, ಎಂ.ಸಿ.ವೀರಸ್ವಾಮಿ, ನಿಂಬಗಲ್ ರಾಮಕೃಷ್ಞ, ಎಚ್.ಶೇಷು, ಬಸವರಾಜ, ರಾಮಾಂಜನೇಯ, ಮಲ್ಲಿಕಾರ್ಜುನ ಕೊಟಗಿನಾಳ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.