ಗುರುವಾರ , ಸೆಪ್ಟೆಂಬರ್ 23, 2021
20 °C

ಹೊಸಪೇಟೆಯಲ್ಲಿ ಬಿರುಸಿನ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ನಗರ ಸೇರಿದಂತೆ ಸುತ್ತಮುತ್ತಲಿನ ಭಾಗಗಳಲ್ಲಿ ಶುಕ್ರವಾರ ಬಿರುಸಿನ ಮಳೆಯಾಗಿದೆ.

ಮಧ್ಯಾಹ್ನ ಮೂರುವರೆಯಿಂದ ಸಂಜೆ 5.30ರ ವರೆಗೆ ಎಡೆಬಿಡದೆ ಬಿರುಸಾಗಿ ಮಳೆ ಸುರಿದಿದೆ. ಬೆಳಿಗ್ಗೆಯಿಂದ ಕಾರ್ಮೋಡ ಕವಿದಿತ್ತು. ಮಧ್ಯಾಹ್ನ ಆರಂಭಗೊಂಡ ಜಿಟಿಜಿಟಿ ಮಳೆ ನಂತರ ಬಿರುಸಾಗಿ ಸುರಿಯಿತು.

ಜೋರು ಮಳೆಗೆ ನಗರದ ಹಂಪಿ ರಸ್ತೆಯಲ್ಲಿನ ಚರಂಡಿಗಳು ಉಕ್ಕಿ ಹರಿದಿವೆ. ಇದರ ಪರಿಣಾಮ ರಸ್ತೆಯ ಮೇಲೆ ಹೊಲಸು ನೀರು ಹರಿಯಿತು. ವಾಹನ ಸವಾರರ ಪರದಾಟ ನಡೆಸಿದರು. ನೀರಿನ ಪ್ರಮಾಣ ತಗ್ಗುವವರೆಗೆ ವಾಹನ ಸಂಚಾರಕ್ಕೆ ತೊಡಕಾಯಿತು.

ತಾಲ್ಲೂಕಿನ ನಾಗೇನಹಳ್ಳಿ, ಹೊಸೂರು, ಧರ್ಮದಗುಡ್ಡ, ಬಸವನದುರ್ಗ ಸೇರಿದಂತೆ ಹಲವೆಡೆ ಮಳೆಯಾಗಿರುವುದು ವರದಿಯಾಗಿದೆ.
ನಾಲ್ಕು ದಿನಗಳಿಂದ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಮಳೆಯಾಗುತ್ತಿದೆ. ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೆ ಮೋಡ ಕವಿದಿರುತ್ತದೆ. ಮಧ್ಯಾಹ್ನದಿಂದ ಸಂಜೆಯ ವರೆಗೆ ಬಿಟ್ಟು ಬಿಟ್ಟು ಮಳೆಯಾಗುತ್ತಿದೆ. ಸತತ ಮಳೆಗೆ ವಾತಾವರಣ ಸಂಪೂರ್ಣ ತಂಪಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು