ಶುಕ್ರವಾರ, ಆಗಸ್ಟ್ 19, 2022
22 °C
ಸತತ ಏರಿಕೆಯಾಗುತ್ತಿರುವ ಜಲಾಶಯದ ಒಳಹರಿವು

ಹೊಸಪೇಟೆ: ಒಂದೇ ದಿನ ತುಂಗಭದ್ರಾ ಅಣೆಕಟ್ಟೆಗೆ ಹರಿದು ಬಂತು 6 ಟಿಎಂಸಿ ನೀರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ಇಲ್ಲಿನ ತುಂಗಭದ್ರಾ ಜಲಾಶಯಕ್ಕೆ ಒಂದೇ ದಿನಕ್ಕೆ 6 ಟಿಎಂಸಿ ಅಡಿಗೂ ಅಧಿಕ ನೀರು ಹರಿದು ಬಂದಿದೆ.

ಜಲಾನಯನ ಪ್ರದೇಶ ಹಾಗೂ ಮಲೆನಾಡಿನಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಸತತವಾಗಿ ಒಳಹರಿವು ಹೆಚ್ಚಾಗುತ್ತಿದೆ. ಬರುವ ದಿನಗಳಲ್ಲಿ ನೀರಿನ ಹರಿವು ಇನ್ನಷ್ಟು ಹೆಚ್ಚಾಗಲಿದೆ ಎಂದು ತುಂಗಭದ್ರಾ ಜಲಾಶಯ ಆಡಳಿತ ಮಂಡಳಿ ಮೂಲಗಳು ತಿಳಿಸಿವೆ.

ಗುರುವಾರ 60941 ಕ್ಯುಸೆಕ್‌ ಒಳಹರಿವು ದಾಖಲಾಗಿದೆ. ಬುಧವಾರ 34075 ಕ್ಯುಸೆಕ್‌, ಮಂಗಳವಾರ 22,536 ಕ್ಯುಸೆಕ್‌ ಒಳಹರಿವು ದಾಖಲಾದರೆ, ಸೋಮವಾರ 11,370 ಕ್ಯುಸೆಕ್‌ ಒಳಹರಿವು ದಾಖಲಾಗಿತ್ತು. 105.788 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯದ ಅಣೆಕಟ್ಟೆಯಲ್ಲಿ ಸದ್ಯ 58.212 ಟಿಎಂಸಿ ಅಡಿ ನೀರಿನ ಸಂಗ್ರಹವಿದೆ. ಬುಧವಾರ 52.989 ಟಿಎಂಸಿ ಅಡಿ ನೀರಿನ ಸಂಗ್ರಹವಿತ್ತು. ಇದೇ ರೀತಿ ಒಳಹರಿವು ಇದ್ದರೆ ಇನ್ನೊಂದು ವಾರದಲ್ಲಿ ಜಲಾಶಯ ಸಂಪೂರ್ಣ ತುಂಬಬಹುದು. 

ಜಿಲ್ಲೆಯಾದ್ಯಂತ ಕಾರ್ಮೋಡ ಕವಿದಿದ್ದು, ಬಿಟ್ಟು ಬಿಟ್ಟು ತುಂತುರು ಮಳೆಯಾಗುತ್ತಿದೆ. ಸತತ ನಾಲ್ಕು ದಿನಗಳಿಂದ ಇದೇ ರೀತಿಯ ವಾತಾವರಣ ಇದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು