ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯನಗರ | ತುಂಗಭದ್ರಾ ಜಲಾಶಯದಿಂದ ನೀರು ಬಿಡುಗಡೆ, ಹಂಪಿ ಸ್ಮಾರಕಗಳು ಮುಳುಗಡೆ

Last Updated 13 ಜುಲೈ 2022, 8:17 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಇಲ್ಲಿನ ತುಂಗಭದ್ರಾ ಜಲಾಶಯ ಸಂಪೂರ್ಣ ತುಂಬಿರುವುದರಿಂದ ನದಿಗೆ ಅಪಾರ ಪ್ರಮಾಣದ ನೀರು ಹರಿಸುತ್ತಿರುವುದರಿಂದ ವಿಶ್ವಪ್ರಸಿದ್ಧ ಹಂಪಿ ಸ್ಮಾರಕಗಳು ಮುಳುಗಿವೆ.

ಹಂಪಿ ಪುರಂದರ ಮಂಟಪ, ವಿಜಯನಗರ ಕಾಲದ ಕಾಲು ಸೇತುವೆ, ರಾಮ ಲಕ್ಷ್ಮಣ ದೇವಸ್ಥಾನ, ಚಕ್ರತೀರ್ಥ ಸ್ನಾನಘಟ್ಟ ತುಂಗಭದ್ರಾ ನದಿ ಪಾತ್ರಕ್ಕೆ ಹೊಂದಿಕೊಂಡಿವೆ. ಜಲಾಶಯದ ಒಟ್ಟು 33 ಕ್ರಸ್ಟ್ ಗೇಟ್ ಗಳ ಪೈಕಿ 28 ಗೇಟ್ ಗಳಿಂದ ನದಿಗೆ ಒಂದು ಲಕ್ಷ ಕ್ಯುಸೆಕ್ ಗೂ ಅಧಿಕ ನೀರು ನದಿಗೆ ಹರಿಸಲಾಗುತ್ತಿದೆ. 105.788 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯ ದ ಜಲಾಶಯ ಈಗಾಗಲೇ ಸಂಪೂರ್ಣ ಭರ್ತಿಯಾಗಿದೆ. ಒಂದು ಲಕ್ಷ ಕ್ಯುಸೆಕ್ ಗೂ ಅಧಿಕ ಒಳಹರಿವು ಇದೆ. ಒಂದೂವರೆ ಲಕ್ಷ ಕ್ಯುಸೆಕ್ ನೀರು ಯಾವುದೇ ಕ್ಷಣದಲ್ಲೂ ನದಿಗೆ ಹರಿಸಲಾಗುವುದು. ಜನ ಮುನ್ನೆಚ್ಚರಿಕೆ ವಹಿಸಬೇಕೆಂದು ಜಲಾಶಯ ಆಡಳಿತ ಮಂಡಳಿ ತಿಳಿಸಿದೆ.

ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರೆದಿದೆ.

ತುಂಗಭದ್ರಾ ಜಲಾಶಯದಿಂದ ನದಿಗೆ ಒಂದು ಲಕ್ಷ ಕ್ಯುಸೆಕ್ ನೀರು ಹರಿಸುತ್ತಿರುವುದರಿಂದ ಕಂಪ್ಲಿ-ಗಂಗಾವತಿ ಸೇತುವೆ ಮುಳುಗುವ ಹಂತಕ್ಕೆ ಬಂದಿದ್ದು, ಸಾರ್ವಜನಿಕ ಸಂಚಾರ ನಿರ್ಬಂಧಿಸಲಾಗಿದೆ. ವಾಹನಗಳು ಬುಕ್ಕಸಾಗರ-ಕಡೇಬಾಗಿಲು ಹೊಸ ಸೇತುವೆ ಮೂಲಕ ಸಂಚರಿಸುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT