ಸೋಮವಾರ, ಏಪ್ರಿಲ್ 12, 2021
29 °C

ಕರ್ನಾಟಕ ಸಾಹಿತ್ಯ ಅಕಾಡೆಮಿ: ಮೃತ್ಯುಂಜಯ ರುಮಾಲೆಗೆ ‘ಸಾಹಿತ್ಯಶ್ರೀ’ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯನಗರ (ಹೊಸಪೇಟೆ): ಇಲ್ಲಿನ ವಿಜಯನಗರ ಕಾಲೇಜಿನ ಹಿರಿಯ ಪ್ರಾಧ್ಯಾಪಕ, ಸಾಹಿತಿ ಮೃತ್ಯುಂಜಯ ರುಮಾಲೆ ಅವರು ಕರ್ನಾಟಕ ಸಾಹಿತ್ಯ ಅಕಾಡೆಮಿಯ ‘ಸಾಹಿತ್ಯಶ್ರೀ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಕನ್ನಡ ಸಾಹಿತ್ಯಕ್ಕೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಅವರನ್ನು 2020ನೇ ಸಾಲಿನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ₹25 ಸಾವಿರ ನಗದು, ಪ್ರಮಾಣ ಪತ್ರ ಒಳಗೊಂಡಿದೆ. ರುಮಾಲೆ ಅವರು ಪ್ರಾಧ್ಯಾಪಕರಾಗಿದ್ದು, ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿ ಪಾಲ್ಗೊಳ್ಳುತ್ತ ಬಂದಿದ್ದಾರೆ. ಅನೇಕ ಕೃತಿಗಳನ್ನು ಬರೆದಿದ್ದಾರೆ.

ಇದನ್ನೂ ಓದಿ: 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು