ಸಿಂಡಿಕೇಟ್ ಸದಸ್ಯರೊಂದಿಗೆ ಚರ್ಚಿಸಿ ಅವರೊಂದಿಗೆ ಏಪ್ರಿಲ್ ಬಳಿಕ ಮುಖ್ಯಮಂತ್ರಿ ಅವರನ್ನು ಕಂಡು ಪೂರಕ ಬಜೆಟ್‌ನಲ್ಲಿ ಅನುದಾನ ಒದಗಿಸಲು ವಿನಂತಿಸಲಾಗುವುದು
ಪ್ರೊ.ಡಿ.ವಿ.ಪರಮಶಿವಮೂರ್ತಿ ಕುಲಪತಿ ಹಂಪಿ ಕನ್ನಡ ವಿಶ್ವವಿದ್ಯಾಲಯ
ಸಚಿವರು ಶಾಸಕರು ನಿಷ್ಕ್ರಿಯ?
ಬಳ್ಳಾರಿ ಮತ್ತು ವಿಜಯನಗರ ಎರಡೂ ಜಿಲ್ಲೆಗಳ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ತಮ್ಮ ಅಲ್ಪಸಂಖ್ಯಾತ ಇಲಾಖೆಗೆ ಬಜೆಟ್‌ನಲ್ಲಿ ಹಣ ಕೊಡಿಸಲು ಸಫಲರಾಗಿದ್ದಾರೆ. ಆದರೆ ತಮ್ಮ ವ್ಯಾಪ್ತಿಗೆ ಬರುವ ಕನ್ನಡ ವಿಶ್ವವಿದ್ಯಾಲಯದ ಆರ್ಥಿಕ ಸಂಕಷ್ಟ ಪರಿಹಾರಕ್ಕೆ ಕ್ರಮ ಕೈಗೊಂಡಿಲ್ಲ. ಸ್ಥಳೀಯ ಶಾಸಕ ಎಚ್.ಆರ್.ಗವಿಯಪ್ಪ ಅವರಿಗೂ ಸಮಸ್ಯೆಯ ಮನವರಿಕೆ ಮಾಡಲಾಗಿತ್ತು ಅವರು ಸಹ ಸರ್ಕಾರದ ಮೇಲೆ ಒತ್ತಡ ಹಾಕಿಲ್ಲದಿರುವುದು ಈ ಬಜೆಟ್‌ನಿಂದ ಮನವರಿಕೆಯಾಗುತ್ತಿದೆ ಎಂದು ವಿಶ್ವವಿದ್ಯಾಲಯದ ಹಿರಿಯ ಅಧಿಕಾರಿಯೊಬ್ಬರು ದೂರಿದರು.