ಕೂಡ್ಲಿಗಿ: ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡದೇ ಅನುದಾನ ಹಂಚಿಕೆ ಮಾಡಿದ್ದೇನೆ. ಕ್ಷೇತ್ರದ ಯಾವುದೇ ಹಳ್ಳಿಗೆ ಹೋಗಿ ನೋಡಿದ್ರೂ ಅಭಿವೃದ್ಧಿ ಆಗಿದೆ ಎಂದು ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಹೇಳಿದರು.

ತಾಲ್ಲೂಕಿನ ಆಲೂರು ಗ್ರಾಮ ಪಂಚಾಯ್ತಿಯಲ್ಲಿ ಶನಿವಾರ ಅಯೋಜಿಸಿದ್ದ ಮನೆ ಮನೆಗೂ ನಮ್ಮ ಶಾಸಕರು, ಮನೆ ಬಾಗಿಲಿಗೆ ನಮ್ಮ ಸರ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾಡಿದ ಅವರು, ಸಾವಿರಕ್ಕೂ ಹೆಚ್ಚು ಕೋಟಿ ಅನುದಾನ ತಂದು ಶಕ್ತಿ ಮೀರಿ ಕೆಲಸ ಮಾಡಿದ್ದೇನೆ, ಕ್ಷೇತ್ರದ ರೈತರ ಅನುಕೂಲಕ್ಕಾಗಿ ಅಂತರ್ಜಲ, ವಿದ್ಯುತ್ ಸೇರಿ ಇತರೆ ಕಾಮಗಾರಿಗಳಿಗೆ ಒತ್ತು ನೀಡಲಾಗಿದೆ ಎಂದರು.

ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಣಾಧಿಕಾರಿ ನರಸಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ತಹಶೀಲ್ದಾರ್ ವಿ.ಕೆ.ನೇತ್ರಾವತಿ ಮಾತನಾಡಿದರು.

ಮುಖಂಡರಾದ ಕೆ.ಎಂ.ಶಶಿಧರ ಸ್ವಾಮಿ, ಎಪಿಎಂಸಿ ಅಧ್ಯಕ್ಷ ಕುರಿಹಟ್ಟಿ ಬೋಸಣ್ಣ, ಬಣವಿಕಲ್ಲು ಯರ್ರಿಸ್ವಾಮಿ, ತಳವಾರ್ ಶರಣಪ್ಪ, ಚಂದ್ರಮೌಳಿ, ಕ್ಷೇತ್ರ ಶಿಕ್ಷಣಾಧಿಕಾರಿ ಮೈಲೇಶ್ ಬೇವೂರು, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜನಿಯರ್ ಕೆ.ನಾಗನಗೌಡ ತಾಲ್ಲೂಕು ಆರೋಗ್ಯಾಧಿಕಾರಿ ಪ್ರದೀಪ್, ಪಿ ಆರ್ ಇ ಡಿ ಎಂಜಜಿನಿಯರ್ ಮಲ್ಲಿಕಾರ್ಜುನ, ಎಪಿಎಂಸಿ ಕಾರ್ಯದರ್ಶಿ ಬಸವರಾಜ, ಕರ್ನಾಟಕ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ವೆಂಕಟೇಶ್, ಕಂದಾಯ ನಿರೀಕ್ಷಕ ಕೊಟ್ರೇಶ್, ತೋಟಗಾರಿಕೆ ಅಧಿಕಾರಿ ಕುಬೇರಾಚಾರಿ, ಪಿಡಿಒ ವಿನಯ್ ಕುಮಾರ್ ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ರೇಷ್ಮೆ ಬೆಳೆಗಾರರಿಗೆ ರೇಷ್ಮೆ ಗೂಡು ಕಟ್ಟುವ ಚಂದ್ರಿಕೆ ಸೇರಿದಂತೆ ಇತರೆ ಸಾಮಗ್ರಿಗಳನ್ನು ವಿತರಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-25-1928564592

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.