ಕೂಡ್ಲಿಗಿ: ‘ಕ್ಷೇತ್ರದಲ್ಲಿ ಯಾವುದೇ ಕಾರಣಕ್ಕೂ ಭ್ರಷ್ಟಾಚಾರ ಸಹಿಸುವುದಿಲ್ಲ’ ಎಂದು ಶಾಸಕ ಡಾ.ಶ್ರೀನಿವಾಸ್ ಎನ್ .ಟಿ. ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ‘ತಾಲ್ಲೂಕಿನ ಜರಿಮಲೆ ಗ್ರಾಮದ ವ್ಯಾಪ್ತಿಯಲ್ಲಿ ಪಡಿತರ ವಿತರಣೆ ಲೋಪಕ್ಕೆ ಸಂಬಂಧಿಸಿದಂತೆ ತಾಲ್ಲೂಕು ಕಚೇರಿ ಆಹಾರ ವಿಭಾಗದ ಇಬ್ಬರು ಸಿಬ್ಬಂದಿಯನ್ನು ಈಗಾಗಲೇ ವರ್ಗಾವಣೆ ಮಾಡಲಾಗಿದೆ. ಕ್ಷೇತ್ರದ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಯಶಸ್ವಿಯಾಗಿ ಜಾರಿಯಾಗಿದ್ದು, ತುಂಗಭದ್ರ ನದಿಯಿಂದ ಜೂನ್ನಿಂದ ಸೆಪ್ಟಂಬರ್ವರಗೆ ನೀರು ತುಂಬಿಸಲಾಗುವುದು’ ಎಂದು ತಿಳಿಸಿದರು.

ತಾಲ್ಲೂಕಿನಲ್ಲಿ 3227 ಜನರಿಗೆ ಹಕ್ಕುಪತ್ರ ನೋಂದಣಿ ಮಾಡಿಸಿಕೊಡಲಾಗಿದೆ. ಸುಂಕದಕಲ್ಲು ಗ್ರಾಮದಲ್ಲಿ 25 ವರ್ಷಗಳ ಹಿಂದೆ ನಿರ್ಮಾಣ ಮಾಡಿದ್ದ ಭಡಾವಣೆಯಲ್ಲಿ ಇದುವರೆಗೂ ಹಕ್ಕುಪತ್ರ ನೀಡಿಲ್ಲ. ಅಲ್ಲಿನ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆಗೆ ಕ್ರಮ ವಹಿಸಲಾಗಿದೆ. ತಾಲ್ಲೂಕಿನಲ್ಲಿ 58 ಅಂಗನವಾಡಿ ಹಾಗೂ 15 ಗ್ರಂಥಾಲಯಗಳ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ ದೊರಕಿದೆ’ ಎಂದು ಹೇಳಿದರು.

ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ. ತಿಪ್ಪೇಸ್ವಾಮಿ, ತಹಶೀಲ್ದಾರ್ ವಿ.ಕೆ. ನೇತ್ರಾವತಿ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ನರಸಪ್ಪ, ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಸ್. ವೆಂಕಟೇಶ್, ಜಿಲ್ಲಾ ಪಂಚಾಯಿತಿ ಎಇಇ ಮಲ್ಲಿಕಾರ್ಜುನ್ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-25-1653739027

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.