ಕೂಡ್ಲಿಗಿ: ತಾಲ್ಲೂಕಿನ ಹರವದಿ ಗ್ರಾಮದಲ್ಲಿನ ಪಡಿತರ ಫಲಾನುಭವಿಗಳಿಗೆ ಅಕ್ಕಿ ವಿತರಿಸದೆ ಅನ್ಯಾಯ ಮಾಡಿದ್ದು, ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ಕಿಸಾನ್ ಸಭಾದ ತಾಲ್ಲೂಕು ಘಟಕದ ಪದಾಧಿಕಾರಿಗಳು ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಎಐಕೆಎಸ್ ರಾಜ್ಯ ಉಪಾಧ್ಯಕ್ಷ ಎಚ್. ವೀರಣ್ಣ ಮಾತನಾಡಿ, ಜರಿಮಲೆ ನ್ಯಾಯ ಬೆಲೆ ಅಂಗಡಿ ವ್ಯಾಪ್ತಿಯಲ್ಲಿ ಬರುವ ಹರವದಿ ಗ್ರಾಮದ ಪಡಿತರ ಫಲಾನುಭವಿಗಳಿಂದ ಕಳೆದ ಮೂರು ತಿಂಗಳಿಂದ ಬಯೋ ಮೆಟ್ರಿಕ್ ಪಡೆದಿದ್ದಾರೆ. ಆದರೆ ಅವರಿಗೆ ಮೂರು ತಿಂಗಳ ಅಕ್ಕಿಯನ್ನು ವಿತರಿಸದೆ ದಾಸ್ತಾನು ಬಂದಿಲ್ಲ. ಬಂದ ನಂತರ ನೀಡಲಾಗುವುದು ಎಂದು ಹಾರಿಕೆ ಉತ್ತರ ನೀಡುತ್ತ ಬಂದಿದ್ದಾರೆ.

ಈ ಬಗ್ಗೆ ತಾಲ್ಲೂಕು ಆಹಾರ ಶಿರೆಸ್ತೇದಾರ್ ಹಾಗೂ ಆಹಾರ ನಿರೀಕ್ಷಕರಿಗೂ ಗೊತ್ತಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ತಾಲ್ಲೂಕಿನ ಎಲ್ಲ ನ್ಯಾಯ ಬೆಲೆ ಅಂಗಡಿಗಳಲ್ಲಿ ಪ್ರತಿ ಕಾರ್ಡಿಗೆ ಎರಡು ಕೆಜಿ ಅಕ್ಕಿ ಕಡಿಮೆ ಕೊಡುತ್ತಿದ್ದಾರೆ. ಇನ್ನು ಕೆಲವು ಕಡೆ ಕಾರ್ಡಿಗೆ ₹10 ಪಡೆಯುತ್ತಾರೆ. ಇಷ್ಟೆಲ್ಲ ನಡೆಯುತ್ತಿದ್ದರು ಆಹಾರ ಶಿರಸ್ತೇದಾರ ಹಾಗೂ ಆಹಾರ ನಿರೀಕ್ಷಕರು ಯಾವ ಅಂಗಡಿಗೂ ಭೇಟಿ ನೀಡಿ ಪರಿಶೀಲಿಸಿಲ್ಲ. ಇಂತಹ ಅಧಿಕಾರಿಗಳನ್ನು ಅಮಾನತು ಮಾಡಬೇಕು ಹಾಗೂ ನ್ಯಾಯ ಬೆಲೆ ಅಂಗಡಿ ವಿರುದ್ದ ಕ್ರಮ ಕೈಗೊಂಡು ಮೂರು ತಿಂಗಳ ಪಡಿತರ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ ಅವರು ಕ್ರಮ ಕೈಗೊಳ್ಳದೆ ಇದ್ದರೆ ತಾಲ್ಲೂಕು ಕಚೇರಿ ಬಳಿ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದರು.

ಗಿರೀಶ್, ಮಂಜುನಾಥ, ರವೇಶ, ಸಿಪಿಐ ತಾಲ್ಲೂಕು ಕಾರ್ಯದರ್ಶಿ ಕರಿಯಪ್ಪ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-25-1920920667

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.