ಕೊಟ್ಟೂರು: ‘ರಕ್ತ ದಾನ ಮಾಡುವುದರಿಂದ ಮತ್ತೊಬ್ಬರ ಪ್ರಾಣ ಉಳಿಸಲು ಸಾಧ್ಯವಾಗುತ್ತದೆ’ ಎಂದು ಪತಂಜಲಿ ಯೋಗ ಸಮಿತಿಯ ಮುಖ್ಯಸ್ಥ ರಾಜೇಶ್ ಕಾರ್ವ ಹೇಳಿದರು.

ಪಟ್ಟಣದ ಬಸ್ನಿಲ್ದಾಣ ಹತ್ತಿರದ ನಾಗರಾಜ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಹಸಿರು ಹೊನಲು ಸೇವಾ ಸಂಸ್ಥೆ ಹಾಗೂ ವಿವೇಕಾನಂದ ರಕ್ತ ಭಂಡಾರದ ಸಹಯೋಗದಲ್ಲಿ ಕಾರ್ಮಿಕರ ದಿನಾಚರಣೆ ಅಂಗವಾಗಿ ಈಚೆಗೆ ಏರ್ಪಡಿಸಿದ್ದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.

‘ರಕ್ತದಾನದಿಂದ ಮಾನಸಿಕ ಮತ್ತು ದೈಹಿಕ ಆರೋಗ್ಯ ಸುಧಾರಿಸುತ್ತದೆ. ಹೊಸ ರಕ್ತ ಉತ್ಪಾದನೆ ಆಗುತ್ತದೆ. ಸಾರ್ವಜನಿಕರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಬೇಕು’ ಎಂದರು.

ಪೌರಕಾರ್ಮಿಕರನ್ನು ಸನ್ಮಾನಿಸಲಾಯಿತು. ಹಸಿರು ಹೊನಲು ತಂಡದ ಗೌರವಾಧ್ಯಕ್ಷ ಸಿ. ಬಸವರಾಜ್, ಅಧ್ಯಕ್ಷ ಎಸ್. ಗುರುರಾಜ್, ಉಪಾಧ್ಯಕ್ಷ ಬಿ.ಆರ್. ವಿಕ್ರಂ, ಕಾರ್ಯದರ್ಶಿ ಅಜಯ್, ಖಜಾಂಚಿ ದೇವರಮನಿ ಸಿದ್ದೇಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-25-1873559617

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.