ಕೊಟ್ಟೂರು: ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿನ ಡೊನೇಷನ್ ಹಾವಳಿಗೆ ಕಡಿವಾಣ ಹಾಕಲು ಬುಧವಾರ ಕರೆದಿದ್ದ ಸಭೆ ಮುಂದೂಡಲಾಯಿತು.

ಆಡಳಿತ ಮಂಡಳಿ ಮುಖ್ಯಸ್ಥರು ಹಾಜರಾಗದೆ ಶಿಕ್ಷಕರನ್ನು ಕಳುಹಿಸಿದ ಪ್ರಯುಕ್ತ ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸಭೆಯ ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್ ಜಿ.ಕೆ. ಅಮರೇಶ ಸಭೆಯನ್ನು ಮುಂದೂಡಿದರು.

ತಾಲ್ಲೂಕು ಆಡಳಿತ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕರೆದ ಸಭೆಗೆ ಖಾಸಗಿ ಆಡಳಿತ ಮಂಡಳಿಗಳು ಹಾಜರಾಗದಿರುವುದು ಹಾಗೂ ನಿರ್ಲಕ್ಷ್ಯತನ ತೋರುತ್ತಿರುವುದು ತಾಲ್ಲೂಕು ಅಧಿಕಾರಿಗಳ ಆಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಸಂಘಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಕೂಡಲೇ ಆಡಳಿತ ಮಂಡಳಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಪ್ರಗತಿಪರ ಸಂಘಟನೆಗಳ ಮುಖ್ಯಸ್ಥ ಗುಡಿ ಮಲ್ಲಿಕಾರ್ಜುನ ಮಾತನಾಡಿ, ಇದೇ ಜೂನ್ 11ರಂದು ಈ ಡೊನೇಷನ್ ಹಾವಳಿ ವಿರುದ್ದ ಕೊಟ್ಟೂರು ಬಂದ್ ಮಾಡಿ ಪ್ರತಿಭಟನೆ ಮಾಡುವುದಾಗಿ ತಿಳಿಸಿದರು.

ತಹಶೀಲ್ದಾರ್ ಜಿ.ಕೆ. ಅಮರೇಶ ಮಾತನಾಡಿ, ಜೂನ್ 11ರ ಒಳಗೆ ಪುನಃ ಸಭೆ ಕರೆಯಲಾಗುವುದು ಕಡ್ಡಾಯವಾಗಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗುವುದು ಎಂದರು.

ಖಾಸಗಿ ಶಿಕ್ಷಣ ಸಂಸ್ಥೆಗಳು ಶಿಕ್ಷಕರ ಸಂಬಳವನ್ನು ಬ್ಯಾಂಕ್ ಮೂಲಕ ಕಾನೂನು ಬದ್ಧವಾಗಿ ವೇತನ ಜಮಾ ಮಾಡಿ ನಂತರ ವೇತನದ ಅರ್ಧ ಹಣವನ್ನು ಶಿಕ್ಷಕರಿಂದ ಪುನಃ ಶಿಕ್ಷಣ ಸಂಸ್ಥೆಯವರು ವಾಪಸ್ ಪಡೆಯುವ ಕಾರ್ಯವನ್ನು ಕೆಲವು ಶಿಕ್ಷಣ ಸಂಸ್ಥೆಗಳು ಮಾಡುತ್ತಿವೆ ಎಂದು ಲೇಖಕ ಉಜ್ಜಿನಿ ರುದ್ರಪ್ಪ ಸಭೆಯ ಗಮನಕ್ಕೆ ತಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಮೈಲೇಶ್ ಬೇವೂರ್ ಹಾಗೂ ಪ್ರಗತಿ ಪರ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-25-562274066

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.