ಕೊಟ್ಟೂರು: ಪ್ರಗತಿ ಪರಿಶೀಲನಾ ಸಭೆಗಳಿಗೆ ಇಲಾಖಾಧಿಕಾರಿಗಳು ನಿಖರ ಮಾಹಿತಿಯೊಂದಿಗೆ ಹಾಜರಾಗಬೇಕೆಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ತಾಲ್ಲೂಕು ಘಟಕಾಧ್ಯಕ್ಷ ಅನಿಲ್ ಹೊಸಮನೆ ಹೇಳಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲಿ ಗುರುವಾರ ನಡೆದ ಗ್ಯಾರಂಟಿ ಯೋಜನೆಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಪಂಚ ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಲಭಿಸುವಂತೆ ಕಾರ್ಯೋನ್ಮುಖರಾಗಬೇಕು’ ಎಂದು ಸೂಚಿಸಿದರಲ್ಲದೇ ತಮ್ಮ ಅಧೀನಾಧಿಕಾರಿಗಳನ್ನು ಸಭೆಗೆ ಕಳುಹಿಸುವ ಇಲಾಖಾ ಮುಖ್ಯಸ್ಥರ ವಿರುದ್ಧ ನೋಟಿಸ್ ನೀಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಅನುಷ್ಠಾನ ಸಮಿತಿ ಸದಸ್ಯ ಪಿ. ಪ್ರಭುದೇವ್ ಮಾತನಾಡಿ, ‘ಪಟ್ಟಣದಲ್ಲಿ ಬಸ್ ಡಿಪೊ ಅವಶ್ಯಕವಾಗಿದ್ದು ಸಾರಿಗೆ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಇಲಾಖಾಧಿಕಾರಿಗೆ ಸೂಚಿಸಿದರು. ಸಭೆಗೆ ಅಧಿಕಾರಿಗಳು ಗೈರು ಹಾಜರಾದರೆ ನಿರ್ಣಯ ಕೈಗೊಳ್ಳುವುದು ಹೇಗೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಮಿತಿ ಸದಸ್ಯ ಎಂ.ಎಂ. ಉಮಾಪತಿ ಗೃಹಲಕ್ಷ್ಮಿ ಇಲಾಖೆಗೆ ಸಂಬಂಧಿಸಿದ ಕೆಲವು ಮಾಹಿತಿಗಳನ್ನು ಕೇಳಿದಾಗ ನಿಖರ ಅಂಕಿ ಅಂಶಗಳೊಂದಿಗೆ ಉತ್ತರ ನೀಡದ ಇಲಾಖಾಧಿಕಾರಿ ವಿರುದ್ಧ ಅಧ್ಯಕ್ಷರು ಹಾಗೂ ಸದಸ್ಯರು ಆಕ್ರೋಶ ವ್ಯಕ್ತಪಡಿಸಿ ಮುಂದಿನ ಸಭೆಗೆ ನಿಖರ ಮಾಹಿತಿಯೊಂದಿಗೆ ಬರಬೇಕೆಂದು ಸೂಚಿಸಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆನಂದಕುಮಾರ್, ಸಮಿತಿ ಸದಸ್ಯರಾದ ಎನ್.ಚಂದ್ರಪ್ಪ, ಮಾರಪ್ಪ,ಸುಶೀಲಮ್ಮ, ಎ.ಎಸ್. ಗಾಯಿತ್ರಿ,ಟಿ.ಶಿವರಾಜ್, ಟಿ.ನಾಗಪ್ಪ, ಪಿ.ಕೆ.ಇಂದ್ರಜಿತ್ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-25-346152462

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.