ಕೊಟ್ಟೂರು: ಬಡ ಕುಟುಂಬಗಳು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದು, ಇನ್ನೂ ಕೆಲವರು ಗುಡಿಸಲುಗಳಲ್ಲಿ ಬದುಕು ಸಾಗಿಸುತ್ತಿದ್ದರೂ ಗಮನ ಹರಿಸದಿರುವುದು ಸರ್ಕಾರದ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಭಾರತ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಜಿಲ್ಲಾ ಘಟಕದ ಕಾರ್ಯದರ್ಶಿ ಎಚ್.ಎಂ.ಸಂತೋಷ್ ಆಕ್ರೋಶ ವ್ಯಕ್ತಪಡಿಸಿದರು.

ತಾಲ್ಲೂಕಿನ ಕಾಳಾಪುರ ಗ್ರಾಮದಲ್ಲಿ ಗ್ರಾಮ ಪಂಚಾಯ್ತಿ ಕಚೇರಿ ಅವರಣದಲ್ಲಿ ಸಿಪಿಐ ವತಿಯಿಂದ ಮಂಗಳವಾರ ಆಡಳಿತಾಧಿಕಾರಿ ಡಾ.ಕೆ.ವಿ.ಕೊಟ್ರೇಶ್ ಇವರಿಗೆ ಮನವಿ ಸಲ್ಲಿಸಿ ಮಾತನಾಡಿ, ವಸತಿ ಇಲ್ಲದ ಕುಟುಂಬಗಳಿಗೆ ಸ್ಥಳೀಯ ಆಡಳಿತ ಮತ್ತು ಕಂದಾಯ ಇಲಾಖೆ ಸಮೀಕ್ಷೆ ನಡೆಸಿ ಆಶ್ರಯ ಯೋಜನೆ ಅಡಿಯಲ್ಲಿ ಸೂರು ಕಲ್ಪಿಸಿಕೊಡಬೇಕೆಂದು ಒತ್ತಾಯಿಸಿದರು.

ಅಖಿಲ ಭಾರತ ದಲಿತ ಹಕ್ಕುಗಳ ಆಂದೋಲನ ಜಿಲ್ಲಾ ಘಟಕಾಧ್ಯಕ್ಷ ಕೆ.ಕೊಟ್ರೇಶ್ ಮಾತನಾಡಿ, ಈ ಹಿಂದೆ ಸರ್ಕಾರವು ರಾಜೀವ್ ಗಾಂಧಿ ಯೋಜನೆ ಅಡಿಯಲ್ಲಿ ಬಿಡುಗಡೆಗೊಂಡಿರುವ ಪಟ್ಟಿಯನ್ನು ಕ್ರಮಬದ್ಧವಾಗಿ ಫಲಾನುಭವಿಗಳಿಗೆ ಹಂಚಿಕೆ ಆಗಬೇಕು. 2017-18ನೇ ಸಾಲಿನ ಸಮೀಕ್ಷೆ ಪ್ರಕಾರ 37 ಲಕ್ಷ ಕುಟುಂಬಗಳು ನಿವೇಶನ ಮತ್ತು ವಸತಿರಹಿತ ಎಂದು ವರದಿ ಬಂದಿತ್ತು ಆದರೆ ಪ್ರಸ್ತುತ ವಿಜಯನಗರ ಜಿಲ್ಲೆಯಲ್ಲಿ 50 ಲಕ್ಷಕ್ಕೂ ಅಧಿಕ ಕುಟುಂಬಗಳಿಗೆ ನೆಲೆ ಇಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು.

ತಾಲ್ಲೂಕು ಘಟಕದ ಕಾರ್ಯದರ್ಶಿ ಕೆ.ರೇಣುಕಮ್ಮ, ತಾಲ್ಲೂಕು ಘಟಕಾಧ್ಯಕ್ಷ ತೆಗ್ಗಿನಕೇರಿ ಕೊಟ್ರೇಶ್, ದುರುಗಮ್ಮ, ರೇಣುಕಮ್ಮ,ಗೌರಮ್ಮ, ಲಕ್ಷ್ಮಮ್ಮ, ಮುಂತಾದವರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-25-771820615

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.