ಕೊಟ್ಟೂರು: ‘ಹೆಲ್ಮೆಟ್ ಧರಿಸದವರನ್ನು ಹಿಡಿದು ದಂಡ ವಿಧಿಸುವುದು ಪೊಲೀಸರ ಉದ್ದೇಶವಲ್ಲ, ಪ್ರತಿಯೊಬ್ಬರೂ ಹೆಲ್ಮೆಟ್ ಧರಿಸಿ ತಮ್ಮ ಅಮೂಲ್ಯ ಜೀವ ಕಾಪಾಡಿಕೊಳ್ಳಲಿ ಎಂಬ ಸದುದ್ದೇಶ ಪೊಲೀಸ್ ಇಲಾಖೆಯದ್ದಾಗಿದೆ’ ಎಂದು ಪಿಎಸ್ಐ ಗೀತಾಂಜಲಿ ಶಿಂಧೆ ಹೇಳಿದರು.

ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಶುಕ್ರವಾರ ಹೆಲ್ಮೆಟ್ ಧರಿಸದ ವಾಹನ ಸವಾರರನ್ನು ತಡೆಹಿಡಿದು ಹೆಲ್ಮೆಟ್ ಬಗ್ಗೆ ಜಾಗೃತಿ ಮಾತುಗಳನ್ನಾಡಿ, ‘ಯಾವುದೇ ಜನಹಿತಾಸಕ್ತಿ ಯೋಜನೆ ಸಾಕಾರವಾಗಲು ಜನರ ಸಹಭಾಗಿತ್ವ ಮುಖ್ಯ. ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ಹೆಲ್ಮೆಟ್ ಧರಿಸುವ ಮೂಲಕ ಪೊಲೀಸ್ ಇಲಾಖೆಯ ಕಾರ್ಯಕ್ಕೆ ಕೈ ಜೋಡಿಸಬೇಕು’ ಎಂದು ತಿಳಿಹೇಳಿದರು.

ಹೆಲ್ಮೆಟ್ ಧರಿಸದ ಸವಾರರ ವಾಹನವನ್ನು ವಶಕ್ಕೆ ಪಡೆದು, ಸವಾರರು ಹೆಲ್ಮೆಟ್ ತಂದ ಮೇಲೆ ಯಾವುದೇ ದಂಡ ವಿಧಿಸದೇ ವಾಹನಗಳನ್ನು ಸವಾರರಿಗೆ ಒಪ್ಪಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-25-830606826

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.