ಕೊಟ್ಟೂರು: ಪಟ್ಟಣದ ಉಜ್ಜಯಿನಿ ರಸ್ತೆಯ ಜೋಳದ ಕೂಡ್ಲಿಗಿ ವೃತ್ತದ ಬಳಿ ಅಪೂರ್ಣಗೊಂಡ ರಸ್ತೆ ಕಾಮಗಾರಿಯಿಂದ ಸವಾರರು ವಾಹನ ಚಲಾಯಿಸುವಾಗ ಪ್ರಯಾಸ ಪಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಕಳೆದ ತಿಂಗಳು ಕೊಟ್ಟೂರೇಶ್ವರಸ್ವಾಮಿ ರಥೋತ್ಸವದ ಪ್ರಯುಕ್ತ ಪಟ್ಟಣಕ್ಕೆ ಸಂಪರ್ಕಿಸುವ ಎಲ್ಲ ರಸ್ತೆಗಳನ್ನು ದುರಸ್ತಿಗೊಳಿಸಲು ಲೋಕೋಪಯೋಗಿ ಇಲಾಖೆ ಮುಂದಾಯಿತು. ಆದರೆ ಜೋಳದ ಕೂಡ್ಲಿಗಿ ವೃತ್ತದ ಬಳಿ ಸಿಸಿ ರಸ್ತೆ ನಿರ್ಮಾಣ ಕಾರ್ಯ ಒಂದು ಬದಿ ಪೂರ್ಣಗೊಳಿಸಿ ಮತ್ತೊಂದು ಬದಿಯನ್ನು ಹಾಗೆಯೇ ಬಿಡಲಾಗಿದೆ. ಇದರಿಂದ ರಸ್ತೆ ಸಂಪೂರ್ಣ ಕಲ್ಲುಗಳಿಂದ ಆವೃತವಾಗಿದ್ದು ವಾಹನ ಚಾಲಕರು ಹಾಗೂ ಪಾದಚಾರಿಗಳ ಸಂಚಾರಕ್ಕೆ ಅಡ್ಡಿಯಾಗಿದೆ. ಕೆಲ ತಿಂಗಳ ಹಿಂದೆ ಪಟ್ಟಣದ ಹಲವಾರು ವಾರ್ಡ್ಗಳಲ್ಲಿ ಸಿಸಿ ರಸ್ತೆಗಳಿಗೆ ಶಾಸಕರು ಭೂಮಿಪೂಜೆ ನೆರವೇರಿಸಿದ್ದರೂ ಗುತ್ತಿಗೆ ಪಡೆದ ಗುತ್ತಿಗೆದಾರರು ಕಾಮಗಾರಿ ಚಾಲನೆಗೆ ಮುಂದಾಗಿಲ್ಲ. ಪಟ್ಟಣ ಸೇರಿದಂತೆ ತಾಲ್ಲೂಕಿನ ರಸ್ತೆಗಳ ಸ್ಥಿತಿ ಗತಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಆಡಳಿತ ವೈಖರಿಗೆ ಹಿಡಿದ ಕೈಗನ್ನಡಿಯಾಗಿದೆ. ತಕ್ಷಣ ರಸ್ತೆಗಳ ದುರಸ್ತಿಗೆ ಮುಂದಾಗಬೇಕು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-25-613872077

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.