ಬುಧವಾರ, ಜನವರಿ 19, 2022
23 °C

ಕೊಟ್ಟೂರು ಸ್ವಾಮಿ ಸಂಸ್ಥಾನ ಮಠದ ಪೀಠಾಧಿಪತಿ ಸಂಗನಬಸವ ಸ್ವಾಮೀಜಿ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ಹೊಸಪೇಟೆ (ವಿಜಯನಗರ): ಇಲ್ಲಿನ ಕೊಟ್ಟೂರು ಸ್ವಾಮಿ ಸಂಸ್ಥಾನ ಮಠದ ಪೀಠಾಧಿಪತಿ ಸಂಗನಬಸವ ಸ್ವಾಮೀಜಿ (83) ಅವರು ಸೋಮವಾರ ನಸುಕಿನ ಜಾವ ಬೆಂಗಳೂರಿನ ಅಪೊಲೊ ಆಸ್ಪತ್ರೆಯಲ್ಲಿ ನಿಧನರಾದರು.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕೆಲ ದಿನಗಳ ಹಿಂದೆ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅನಾರೋಗ್ಯದ ಕಾರಣದಿಂದ ಕಳೆದ‌ ಎರಡು ವರ್ಷಗಳಿಂದ  ಸಾರ್ವಜನಿಕ ಸಮಾರಂಭಗಳಿಂದ‌ ದೂರ‌ ಉಳಿದಿದ್ದರು.

ಹಂಪಿ ಹೇಮಕೂಟ, ಬಾದಾಮಿ ಶಿವಯೋಗ ಮಂದಿರ, ಬಳ್ಳಾರಿ ಮತ್ತು ಹಾಲಕೆರೆ ಮಠದ ಅಧ್ಯಕ್ಷರಾಗಿದ್ದರು. ಶಾಖಾ ಮಠದ ಸ್ವಾಮೀಜಿಗಳು ಸಭೆ ಸೇರಿ ಚರ್ಚಿಸಿದ ನಂತರ ಅಂತ್ಯಕ್ರಿಯೆ ಎಲ್ಲಿ? ಯಾವಾಗ? ನಡೆಸಬೇಕು ಎನ್ನುವುದು ಅಂತಿಮವಾಗಲಿದೆ.

ಬಾಗಲಕೋಟೆ ಜಿಲ್ಲೆ‌ ಜಮಖಂಡಿ ತಾಲ್ಲೂಕಿನ ಬಿದರಿ, ಸ್ವಾಮೀಜಿ‌ ಹುಟ್ಟೂರು. ಲಿಂಗಾಯತ ಪ್ರತ್ಯೇಕ ಧರ್ಮ ವಿರೋಧಿ ಬಣದ ನೇತೃತ್ವ ಸ್ವಾಮೀಜಿ‌ ವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು