ಹೊಸಪೇಟೆ (ವಿಜಯನಗರ): ಬಗರ್ ಹುಕುಂ ಸಾಗುವಳಿದಾರರ ಮೇಲೆ ಅರಣ್ಯ ಇಲಾಖೆಯವರ ದೌರ್ಜನ್ಯ ಖಂಡಿಸಿ ಕರ್ನಾಟಕ ಪ್ರಾಂತ ರೈತ ಸಂಘದವರು (ಕೆಪಿಆರ್‌ಎಸ್) ನಗರದ ತಹಶೀಲ್ದಾರ್ ಕಚೇರಿ ಎದುರು ಶುಕ್ರವಾರ ಸಾಂಕೇತಿಕ ಪ್ರತಿಭಟನೆ ನಡೆಸಿದರು.
ಅನೇಕ ದಶಕಗಳಿಂದ ರೈತರು ಸಾಗುವಳಿ ಮಾಡುತ್ತಿದ್ದಾರೆ. ಅಂತಹವರ ಮೇಲೆ ದೌರ್ಜನ್ಯ ನಡೆಸುವುದು ಸರಿಯಲ್ಲ. ಅವರಿಗೆ ರಕ್ಷಣೆ ಒದಗಿಸಬೇಕು. ಅರ್ಜಿ ಸಲ್ಲಿಸಿದ ರೈತರಿಗೆ ಹಕ್ಕುಪತ್ರಗಳನ್ನು ನೀಡಬೇಕು. ದೌರ್ಜನ್ಯ ನಡೆಸಿ, ಬೆದರಿಕೆ ಹಾಕಿ ಒಕ್ಕಲೆಬ್ಬಿಸುವ ಪ್ರಯತ್ನ ಕೈಬಿಡಲು ಸರ್ಕಾರ ಗಂಭೀರವಾದ ಕ್ರಮಗಳನ್ನು ಕೈಗೊಳ್ಳಬೇಕೆಂದು ಮುಖ್ಯಮಂತ್ರಿಯವರ ಹೆಸರಿಗೆ ಬರೆದ ಮನವಿ ಪತ್ರ ತಹಶೀಲ್ದಾರ್‌ಗೆ ಸಲ್ಲಿಸಿ ಒತ್ತಾಯಿಸಿದರು.
ಸಂಘದ ಜಿಲ್ಲಾಧ್ಯಕ್ಷ ಎನ್. ಯಲ್ಲಾಲಿಂಗ, ಆರ್. ಭಾಸ್ಕರ್ ರೆಡ್ಡಿ, ಪ್ರಕಾಶ್, ಗೋಪಾಲ್ ಇತರರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.