ಹೊಸಪೇಟೆ (ವಿಜಯನಗರ): ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ವಿಜಯನಗರ ಜಿಲ್ಲೆ ಶೇ 65.61 ಉತ್ತೀರ್ಣ ಪ್ರಮಾಣದೊಂದಿಗೆ ರಾಜ್ಯದಲ್ಲಿ 27ನೇ ಸ್ಥಾನಕ್ಕೆ ಕುಸಿದಿದೆ. ಕಳೆದ ವರ್ಷ ಜಿಲ್ಲೆ 10ನೇ ಸ್ಥಾನದಲ್ಲಿತ್ತು.

ಜಿಲ್ಲೆಯಲ್ಲಿ 20,619 ಮಂದಿ ಪರೀಕ್ಷೆಗೆ ನೋಂದಾಯಿಸಿದ್ದರು. ಈ ಪೈಕಿ 13,528 ಮಂದಿ ಉತ್ತೀರ್ಣರಾಗಿದ್ದಾರೆ.

ಈ ವರ್ಷ ಇದೇ ಪ್ರಥಮ ಬಾರಿಗೆ ಎಲ್ಲಾ ಪರೀಕ್ಷಾ ಕೊಠಡಿಗಳಲ್ಲಿ ಸಿ.ಸಿ.ಟಿ.ವಿ. ಕ್ಯಾಮೆರಾ ಅಳವಡಿಸಿ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿತ್ತು. ಜಿಲ್ಲೆಯ 65 ಪರೀಕ್ಷಾ ಕೇಂದ್ರಗಳಲ್ಲಿನ ಎಲ್ಲಾ 919 ಕೊಠಡಿಗಳಿಗೆ ಈ ವ್ಯವಸ್ಥೆ ಮಾಡಲಾಗಿತ್ತು. ಇದರಿಂದ ಫಲಿತಾಂಶದಲ್ಲಿ ಕುಸಿತ ಕಾಣಬಹುದು ಎಂದು ಕೆಲವು ಪೋಷಕರು ಮತ್ತು ಶಿಕ್ಷಕರು ಅಂದಾಜಿಸಿದ್ದರು. ಅದರಂತೆಯೇ ಆಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.