ಸೋಮವಾರ, ಅಕ್ಟೋಬರ್ 18, 2021
26 °C

ಕೂಡ್ಲಿಗಿ: ಆಂಬುಲೆನ್ಸ್‌ನಲ್ಲೇ ಅವಳಿ ಹೆಣ್ಣು ಮಕ್ಕಳ ಜನನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೂಡ್ಲಿಗಿ (ವಿಜಯನಗರ ಜಿಲ್ಲೆ): ತಾಲ್ಲೂಕಿನ ಪಾಲಯ್ಯನಕೋಟೆ ಗ್ರಾಮದ ಹಂಪಮ್ಮ ಅವರಿಗೆ ಸೋಮವಾರ ರಾತ್ರಿ ಅಂಬುಲೆನ್ಸ್‌ನಲ್ಲಿಯೇ ಅವಳಿ ಹೆಣ್ಣು ಮಕ್ಕಳು ಜನಿಸಿದ್ದಾರೆ.

ರಾತ್ರಿ 11.40ರ ಸುಮಾರಿಗೆ ಹಂಪಮ್ಮ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, 108ಕ್ಕೆ ಕರೆ ಮಾಡಿದ್ದಾರೆ. ನಂತರ ಉಜ್ಜಿನಿ ಪ್ರಾಥಮಿಕ ಆರೋಗ್ಯ ಕೇಂದ್ರದ 108 ಸಿಬ್ಬಂದಿ ತಮ್ಮ ವಾಹನದಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯದಲ್ಲಿಯೇ ಅವಳಿ ಹೆಣ್ಣುಮಕ್ಕಳಿಗೆ ಜನ್ಮ ನೀಡಿದ್ದಾರೆ.

12 ಗಂಟೆಗೆ ಮೊದಲ ಮಗು, 12.20ಕ್ಕೆ ಎರಡನೇ ಮಗುವಿನ ಜನನವಾಗಿದೆ. ಶುಶ್ರೂಷಕಿ ನಾಗವೇಣಿ, ಚಾಲಕ ಕೊಟೇಶ್ ಉಜ್ಜಿನಿ ಹೆರಿಗೆ ಮಾಡಿಸಿದ್ದಾರೆ. ಬಳಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು