ಕೂಡ್ಲಿಗಿ: ‘ಬಿಸಿಲು ತೀವ್ರ ಹೆಚ್ಚಾದ ಹಿನ್ನೆಲೆಯಲ್ಲಿ ತಾಲ್ಲೂಕಿನಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಎಚ್ಚರವಹಿಸಬೇಕು’ ಎಂದು ತಹಶೀಲ್ದಾರ್ ವಿ.ಕೆ. ನೇತ್ರಾವತಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಗುರುವಾರ ನಡೆದ ಕುಡಿಯುವ ನೀರಿನ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಪಟ್ಟಣ ಸೇರಿದಂತೆ ತಾಲ್ಲೂಕಿನಲ್ಲಿ ನೀರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಪ್ರತಿ ಗ್ರಾಮ ಪಂಚಾಯಿತಿಗೆ ಒಬ್ಬರಂತೆ ಆಡಳಿತಾಧಿಕಾರಿ ನೇಮಕ ಮಾಡಲಾಗಿದ್ದು, ಸಂಬಂಧಿಸಿದ ಅಧಿಕಾರಿಗಳು ಜವಾಬ್ದಾರಿ ವಹಿಸಬೇಕು’ ಎಂದು ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಕೆ. ನರಸಪ್ಪ ಮಾತನಾಡಿ, ‘ಪ್ರತಿ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಎದುರಾಗದಂತೆ ಕ್ರಮವಹಿಸಲು ಈಗಾಗಲೇ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. 14 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಎದುರಾಗಬಹುದು ಎಂದು ಅಂದಾಜು ಪಟ್ಟಿ ಮಾಡಲಾಗಿದೆ. ನೀರಿನ ಸಮಸ್ಯೆ ಕಂಡುಬಂದಲ್ಲಿ ಸಾರ್ವಜನಿಕರು ಸಹಾಯವಾಣಿಗೆ ದೂರು ನೀಡಬಹುದು’ ಎಂದರು.

ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಎಇಇ ಪ್ರಸನ್ನ, ಪಶು ಸಂಗೋಪನೆ ಇಲಾಖೆ ಸಹಾಯಕ ನಿರ್ದೇಶಕ ಡಾ.ಲೋಹಿತ್ ಕುಮಾರ್, ಕ್ಷೇತ್ರ ಸಮನ್ವಯಾಧಿಕಾರಿ ಎಸ್.ಎಸ್.ಜಗದೀಶ್, ಬಿಸಿಯೂಟ ಯೋಜನಾಧಿಕಾರಿ ಕೆ.ಜಿ. ಆಂಜನೇಯ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ತೇಜವರ್ಧನ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಾಲುಂಭಿ, ತೋಟಗಾರಿಕೆ ಸಹಾಯಕ ನಿರ್ದೇಶಕ ಕುಬೇರಚಾರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-25-172100931

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.