ಕೂಡ್ಲಿಗಿ: ‘ಕ್ಷೇತ್ರದ ಗ್ರಾಮಗಳಲ್ಲಿ ಕುಡಿಯುವ ನೀರು, ಸ್ವಚ್ಛತೆ ಹಾಗೂ ವಿದ್ಯುತ್ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು’ ಎಂದು ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಗ್ರಾಮಗಳಿಗೆ ಖುದ್ದು ಭೇಟಿ ನೀಡಿದಾಗ ಸ್ವಚ್ಛತೆ ಮರೀಚಿಕೆಯಾಗಿದೆ. ಪ್ರತಿದಿನ ವಿವಿಧ ಸಮಸ್ಯೆಗಳ ಕುರಿತು ದೂರವಾಣಿ ಮೂಲಕ ದೂರುಗಳು ಬರುತ್ತವೆ. ಗ್ರಾಮಗಳಲ್ಲಿ ಸ್ವಚ್ಛತೆ ಇರದ ಕಾರಣ ಅನೇಕ ಸಾಂಕ್ರಾಮಿಕ ರೋಗಗಳಿಗೆ ಜನರು ತುತ್ತಾಗುತ್ತಿದ್ದಾರೆ. ಎಲ್ಲಾ ಗ್ರಾಮ ಪಂಚಾಯಿತಿಗಳ ಅಧಿಕಾರಿಗಳು ಸ್ವಚ್ಛತೆಗೆ ಆದ್ಯತೆ ನೀಡಬೇಕು’ ಎಂದು ಸೂಚನೆ ನೀಡಿದರು.

‘ತಾಲ್ಲೂಕಿನಲ್ಲಿ ಪಡಿತರ ಆಹಾರ ಪದಾರ್ಥಗಳ ವಿತರಣೆ ಸಮರ್ಪಕವಾಗಿ ಆಗುತ್ತಿಲ್ಲ. ಅಧಿಕಾರಿಗಳು ಕಚೇರಿಯಲ್ಲಿ ಕಾಲಹರಣ ಮಾಡದೆ, ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಸಮರ್ಪಕವಾಗಿ ಪಡಿತರ ವಿತರಣೆ ಆಗುವಂತೆ ನೋಡಿಕೊಳ್ಳಬೇಕು’ ಎಂದು ಶಿರಸ್ತೇದಾರ್ ಕಮಲ ಗುಡ್ಡಪನವರ ಅವರಿಗೆ ನಿರ್ದೇಶನ ನೀಡಿದರು.

‘ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಪೈಪ್ಲೈನ್ ಸಮಸ್ಯೆಯಿಂದ ತಾಲ್ಲೂಕಿನ ಕೆಲ ಗ್ರಾಮಗಳಲ್ಲಿ ನೀರಿನ ತೊಂದರೆ ಎದುರಾಗಿದೆ. ಸಮರ್ಪಕವಾಗಿ ನೀರು ಒದಗಿಸಲು ಕ್ರಮ ವಹಿಸಬೇಕು’ ಎಂದು ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆಯ ಎಇಇ ಪ್ರಸನ್ನ ಅವರಿಗೆ ಹೇಳಿದರು. ‘ಕೆಲವೆಡೆ ರೈಸಿಂಗ್ ಪೈಪ್ಗಳು ಒಡೆದಿದ್ದು, ಶೀಘ್ರದಲ್ಲೇ ದುರಸ್ತಿ ಮಾಡಿ ನೀರು ಸರಬರಾಜು ಮಾಡಲಾಗುವುದು’ ಎಂದು ಪ್ರಸನ್ನ ತಿಳಿಸಿದರು.

ಕೃಷಿ, ರೇಷ್ಮೆ, ಪಶು ಸಂಗೋಪನೆ ಸೇರಿದಂತೆ ವಿವಿಧ ಇಲಾಖೆಗಳ ಯೋಜನೆಗಳ ಕುರಿತು ಚರ್ಚೆ ನಡೆಯಿತು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನರಸಪ್ಪ, ತಹಶೀಲ್ದಾರ್ ವಿ.ಕೆ. ನೇತ್ರಾವತಿ, ಕೊಟ್ಟೂರು ತಹಶೀಲ್ದಾರ್ ಜಿ.ಕೆ. ಅಮರೇಶ್, ಇಒ ಆನಂದ್, ಸಿಪಿಐ ಪ್ರಲ್ಹಾದ್ ಆರ್. ಚನ್ನಗಿರಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಜಿಲಾನ್, ನಾಮನಿರ್ದೇಶನ ಸದಸ್ಯರಾದ ದಿನ್ನೆ ಮಲ್ಲಿಕಾರ್ಜುನ, ಕೋಗಳಿ ಮಂಜುನಾಥ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-25-508906697

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.