ಕೂಡ್ಲಿಗಿ: ಆರ್ ಆರ್ ಸಂಖ್ಯೆ ಇಲ್ಲದ ಎಲ್ಲಾ ರೈತರ ಪಂಪ್ಸೆಟ್ಗಳನ್ನು ಸಕ್ರಮಗೊಳಿಸುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹುಚ್ಚವ್ವನಹಳ್ಳಿ ಬಣದ ಪದಾಧಿಕಾರಿಗಳು ಶುಕ್ರವಾರ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

ರೈತರ ಜಮೀನುಗಳಲ್ಲಿ ಸಮರ್ಪಕವಾಗಿ ಜಿಪಿಎಸ್ ಸರ್ವೆಯನ್ನು ಮಾಡಬೇಕು. ತಾಲ್ಲೂಕು ಹಾಗೂ ಹೋಬಳಿ ಕೇಂದ್ರಗಳಲ್ಲಿ ಖರೀದಿ ಕೇಂದ್ರ ತೆರೆದು, ಎಲ್ಲಾ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ನೀಡಬೇಕು. ತೋಟಗಾರಿಕೆ ಇಲಾಖೆಯಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ರೈತರಿಗೆ ತಲುಪಿಸಬೇಕು. ತಾಲ್ಲೂಕಿನಲ್ಲಿ ನಿಯಮ ಇಲ್ಲದೆ ಕಾಮಗಾರಿ ನಡೆಸುತ್ತಿರುವ ವಿಂಡ್, ಸೋಲರ್, ಪವರ್ ಲೈನ್ಗಳ ಕಂಪನಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು. ಹೆದ್ದಾರಿಯನ್ನು ವೈಜ್ಞಾನಿಕ ಕಾಮಗಾರಿಗಳನ್ನು ಕೈಗೊಳ್ಳುವುದರ ಜೊತೆಗೆ ಅಗತ್ಯವಿರುವ ಕಡೆ ಸೇವಾ ರಸ್ತೆ ಹಾಗೂ ಪ್ಲೈಒವರ್ ನಿರ್ಮಾಣ ಮಾಡಬೇಕು.

ಎಫ್ಡಿಐ ಮೂಲಕ ಗೊಬ್ಬರಾ ವಿತರಣೆ ಮಾಡುವುದನ್ನು ಬಿಟ್ಟು ಹಿಂದಿನ ಅದೇಶದಂತೆ ನೀಡಬೇಕು. ಆರಣ್ಯದ ಪಕ್ಕದಲ್ಲಿರುವ ಜಮೀನುಗಳಲ್ಲಿ ಬೆಳೆದ ಬೆಳೆಗಳಿಗೆ ಕಾಡು ಪ್ರಾಣಿಗಳಿಂದ ಉಂಟಾಗುವ ನಷ್ಟವನ್ನು ಸರ್ಕಾರವೇ ತುಂಬಿಕೊಡಬೇಕು. ಕೃಷಿ ಇಲಾಖೆಯಿಂದ ನಿರ್ವಹಿಸುವ ಬೀಜ, ಗೊಬ್ಬರ, ಔಷಧಿ ಹಾಗೂ ಪರಿಗಳನ್ನು ಮಧ್ಯವರ್ತಿಗಳ ಹವಾಳಿ ತಪ್ಪಿಸಿ ನೇರವಾಗಿ ರೈತರಿಗೆ ಒದಗಿಸಬೇಕು ಎಂದು ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ತಹಶೀಲ್ದಾರ್ ವಿ.ಕೆ. ನೇತ್ರಾವತಿ ಮನವಿ ಪತ್ರ ಸ್ವೀಕರಿಸಿದರು. ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ತೇಜಾವರ್ಧನ್ ಇದ್ದರು.

ಇದಕ್ಕೂ ಮೊದಲು ಪಟ್ಟಣದ ಗಾಂಧೀ ಚಿತಾ ಬಸ್ಮವಿರುವ ಹುತಾತ್ಮರ ಸ್ಮಾರಕದಿಂದ ನೂರಾರು ರೈತರು ಪ್ರತಿಭಟನಾ ಮೆರವಣಿಗೆ ಹೊರಟು ಪ್ರಮುಖ ಬೀದಿಗಳಲ್ಲಿ ಸಾಗಿ ತಾಲ್ಲೂಕು ಕಚೇರಿಗ ತಲುಪಿಸಿದರು.

ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ಟಿ. ತಿಪ್ಪೇಸ್ವಾಮಿ, ಜಿಲ್ಲಾಧ್ಯಕ್ಷ ಬಣಕಾರ ಬಸವರಾಜ, ತಾಲ್ಲೂಕು ಅಧ್ಯಕ್ಷರಾದ ಕೂಡ್ಲಿಗಿ ಜೆ. ಮಾರಪ್ಪ, ಹೊಸಪೇಟ ಶೇಖಪ್ಪ, ಜಗಳೂರು ಚಿರಂಜೀಬಿ, ಸಂಘಟನಾ ಅಧ್ಯಕ್ಷ ಟಿ.ಎಮ್. ಬಾಲರಾಜ, ಪ್ರಧಾನ ಕಾರ್ಯದರ್ಶಿ ಜಗದೀಶ್ ಸ್ವಾಮಿ, ಕಾರ್ಯದರ್ಶಿ ವೀರೇಂದ್ರ ಪಾಟೀಲ್, ಗೌರವಧ್ಯಕ್ಷ ಯು. ನಾಗರಾಜ, ಉಪಾಧ್ಯಕ್ಷ ಕೆ. ಮಂಜುನಾಥ, ಹೊಸಹಳ್ಳಿ ಹೋಬಳಿ ಘಟಕದ ಅಧ್ಯಕ್ಷ ಎಳನೀರು ಮಂಜುನಾಥ, ಪ್ರಧಾನ ಕಾರ್ಯದರ್ಶಿ ಕೆ.ಎಂ. ನಾಗರಾಜ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-25-258868444

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.