ಕೂಡ್ಲಿಗಿ (ವಿಜಯನಗರ ಜಿಲ್ಲೆ): ತಾಲ್ಲೂಕಿನ ಮೊರಬ ಗ್ರಾಮದ ಬಳಿ ಬುಧವಾರ ಸರಕು ವಾಹನವೊಂದು ರಸ್ತೆ ಪಕ್ಕದ ಹೊಲಕ್ಕೆ ಉರುಳಿಬಿದ್ದು 39ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೊರಬ ಗ್ರಾಮದಲ್ಲಿ ಜಾತ್ರೆ ಇದ್ದ ಪ್ರಯುಕ್ತ ಕೂಡ್ಲಿಗಿಯಲ್ಲಿ ಸರಕು ಸಾಗಣೆ ವಾಹನದಲ್ಲಿ ಜನರನ್ನು ತುಂಬಿಕೊಂಡು ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಸಾಗಿ ಮೊರಬ ಕ್ರಾಸ್ ಮುಖಾಂತರ ಮೊರಬಕ್ಕೆ ಹೋಗುವಾಗ ಈ ಘಟನೆ ನಡೆದಿದೆ.

ಗ್ರಾಮದ ಸಮೀಪ ಎದುರುಗಡೆ ಬಂದ ವಾಹನಕ್ಕೆ ದಾರಿ ಬಿಡುವಾಗ ಚಾಲಕನ ನಿಯಂತ್ರಣ ತಪ್ಪಿದ ವಾಹನ ಹೊಲದಲ್ಲಿ ಬಿದ್ದಿದೆ. ಇದರಿಂದ ಅದರಲ್ಲಿದ್ದ 39 ಜನ ಗಾಯಗೊಂಡರು. ಅದೇ ವಾಹನದ ಹಿಂದಿನಿಂದ ಬರುತ್ತಿದ್ದ ಕೂಡ್ಲಿಗಿ ಅಜೇಯ ಹಾಗೂ ಇತರರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿ, ಗಾಯಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು. ಆಸ್ಪತ್ರೆಯಲ್ಲಿ 39ಕ್ಕೂ ಹೆಚ್ಚು ಜನ ಚಿಕಿತ್ಸೆ ಪಡೆದುಕೊಂಡರು. ಈ ಪೈಕಿ 21 ಜನರು ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಬೇರೆ ಅಸ್ಪತ್ರೆಗಳಿಗೆ ತೆರಳಿದ್ದಾರೆ. ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.