ಕೂಡ್ಲಿಗಿ: ಪಟ್ಟಣದ ಪಪ್ಪಿ ಲೇಔಟ್ ಬಳಿ ಟಾಟಾ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಪಡಿತರ ಅಕ್ಕಿಯನ್ನು ತಹಶೀಲ್ದಾರ್ ವಿ.ಕೆ. ನೇತ್ರಾವತಿ ಅವರು ಬುಧವಾರ ವಶಕ್ಕೆ ಪಡೆದರು.

ಪಟ್ಟಣದ ಪಪ್ಪಿ ಲೇಔಟ್ ಬಳಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಣೆ ಮಾಡುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ತಹಶೀಲ್ದಾರರು ವಾಹನವನ್ನು 18 ಸಾವಿರ ಮೌಲ್ಯದ 23 ಪಡಿತರ ಅಕ್ಕಿ ಚೀಲ ಹಾಗೂ ವಾಹನವನ್ನು ವಶಕ್ಕೆ ಪಡೆದಿದ್ದಾರೆ.

ಪಟ್ಟಣದ ಬಾಪೂಜಿ ನಗರ ನಿವಾಸಿ, ವಾಹನ ಚಾಲಕ ತಿಪ್ಪೇಶ ಅವರನ್ನು ವಿಚಾರಿಸಿದಾಗ ಅಕ್ಕಿ ಸಾಗಣೆ ಕುರಿತು ಯಾವುದೇ ದಾಖಲೆಗಳಿಲ್ಲ ಎಂಬುದು ತಿಳಿದು ಎಂದು ಶಿರಸ್ತೇದಾರ್ ಕಮಲ ಗುಡ್ಡಪ್ಪರ್ ತಿಳಿಸಿದರು.

ಈ ಕುರಿತು ಕೂಡ್ಲಿಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-25-2036937710

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.